ಅಂಡಮಾನ್‌ನ ಮೂರು ದ್ವೀಪಗಳ ಮರುನಾಮಕರಣ

0
765

ಅಂಡಮಾನ್‌ ಮತ್ತು ನಿಕೋಬಾರ್‌ನ ಮೂರು ದ್ವೀಪಗಳ ಮರುನಾಮಕರಣ ಮಾಡಲು ಉದ್ದೇಶಿಸಲಾಗಿದೆ.

ನವದೆಹಲಿ: ಅಂಡಮಾನ್‌ ಮತ್ತು ನಿಕೋಬಾರ್‌ನ ಮೂರು ದ್ವೀಪಗಳ ಮರುನಾಮಕರಣ ಮಾಡಲು ಉದ್ದೇಶಿಸಲಾಗಿದೆ.

ರೋಸ್, ನೀಲ್ ಮತ್ತು ಹ್ಯಾವ್‍ಲಾಕ್ ದ್ವೀಪಗಳ ಹೆಸರನ್ನು ಕ್ರಮವಾಗಿ ನೇತಾಜಿ ಸುಭಾಷ್ ಚಂದ್ರ ಬೋಸ್ , ಶಹೀದ್ ಮತ್ತು ಸ್ವರಾಜ್ ದ್ವೀಪಗಳೆಂದು ಮರುನಾಮಕರಣ ಮಾಡಲಾಗುವುದು.

ಇದೇ ಡಿಸೆಂಬರ್ 30 ರಂದು ಪೋರ್ಟ್‌ಬ್ಲೇರ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಈ ವೇಳೆ ಹೆಸರುಗಳನ್ನು ಅಧಿಕೃತವಾಗಿ ಘೋಷಿಸಲಿದ್ದಾರೆ. ಈ ಮೂರು ದ್ವೀಪಗಳ ಹೆಸರು ಬದಲಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.