ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನವೆಂಬರ್​ನಲ್ಲಿ

0
1480

ಧಾರವಾಡದಲ್ಲಿ ನಡೆಯಲಿರುವ ಅಖಿಲ ಭಾರತ 84ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನವೆಂಬರ್​ನಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಧಾರವಾಡ: ಇಲ್ಲಿ ನಡೆಯಲಿರುವ ಅಖಿಲ ಭಾರತ 84ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನವೆಂಬರ್​ನಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಸಮ್ಮೇಳನಕ್ಕೆ ಸಂಬಂಧಪಟ್ಟಂತೆ ಮೊದಲ ಪೂರ್ವಭಾವಿ ಸಭೆ ಆಗಸ್ಟ್.20ರಂದು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ನಡೆಯಲಿದ್ದು, ಬಳಿಕ ಕಸಾಪ ಕೇಂದ್ರೀಯ ಅಧ್ಯಕ್ಷ ಮನು ಬಳಿಗಾರ್​ ಅವರು ಸಮ್ಮೇಳನದ ದಿನಾಂಕ, ನಡೆಯುವ ಸ್ಥಳ ನಿಗದಿ ಮಾಡಲಿದ್ದಾರೆ.

ಕಳೆದ ಸಮ್ಮೇಳನಕ್ಕೆ ಸರ್ಕಾರ 8 ಕೋಟಿ ರೂಪಾಯಿ ನೀಡಿತ್ತು. ಈ ಬಾರಿ 10 ಕೋಟಿ ರೂಪಾಯಿ ನೀಡುವಂತೆ ಮನವಿ ಮಾಡಿದ್ದೇವೆ ಎಂದು ಕಸಾಪ ಜಿಲ್ಲಾಧ್ಯಕ್ಷ ಲಿಂಗರಾಜ ಅಂಗಡಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.