‘ಅಜರ್‌ಗೆ ಜಾಗತಿಕ ಉಗ್ರ ಪಟ್ಟ ಪ್ರಸ್ತಾವಕ್ಕೆ ಪಾಕ್‌ ವಿರೋಧ ಇಲ್ಲ’

0
458

ಜೈಷ್–ಎ–ಮೊಹಮ್ಮದ್‌ ಮುಖ್ಯಸ್ಥ ಮಸೂದ್‌ ಅಜರ್‌ನನ್ನು ಜಾಗತಿಕ ಉಗ್ರ ಎಂದು ಘೋಷಿಸುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಪ್ರಸ್ತಾವವನ್ನು ವಿರೋಧಿಸದೇ ಇರಲು ಪಾಕಿಸ್ತಾನ ಚಿಂತನೆ ನಡೆಸಿದೆ.

ಇಸ್ಲಾಮಾಬಾದ್‌ (ಪಿಟಿಐ): ಜೈಷ್–ಎ–ಮೊಹಮ್ಮದ್‌ ಮುಖ್ಯಸ್ಥ ಮಸೂದ್‌ ಅಜರ್‌ನನ್ನು ಜಾಗತಿಕ ಉಗ್ರ ಎಂದು ಘೋಷಿಸುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಪ್ರಸ್ತಾವವನ್ನು ವಿರೋಧಿಸದೇ ಇರಲು ಪಾಕಿಸ್ತಾನ ಚಿಂತನೆ ನಡೆಸಿದೆ.

‘ಎಲ್ಲ ಉಗ್ರ ಸಂಘಟನೆಗಳ ವಿರುದ್ಧ ನಿರ್ಣಾಯಕ ಕ್ರಮ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ’ ಎಂದು ಹಿರಿಯ ಭದ್ರತಾ ಅಧಿಕಾರಿಯೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿ ಎಕ್ಸ್‌ಪ್ರೆಸ್‌ ಟ್ರಿಬ್ಯೂನ್‌ ವರದಿ ಮಾಡಿದೆ. ಅಜರ್‌ನನ್ನು ಜಾಗತಿಕ ಉಗ್ರ ಎಂದು ಘೋಷಿಸುವಂತೆ ಅಮೆರಿಕ, ಇಂಗ್ಲೆಂಡ್‌ ಹಾಗೂ ಫ್ರಾನ್ಸ್‌ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಹೊಸ ಪ್ರಸ್ತಾವ ಮಂಡಿಸಿದ್ದವು. 

ಈ ಪ್ರಸ್ತಾವನೆ ಅಂಗೀಕಾರಗೊಂಡರೆ ಅಜರ್‌ನ ವಿದೇಶ ಪ್ರಯಾಣಕ್ಕೆ ಕಡಿವಾಣ ಬೀಳಲಿದೆ. ಅವನ ಸಂಘಟನೆಗೆ ಸೇರಿದ ಆಸ್ತಿಗಳನ್ನು ಹಾಗೂ ಶಸ್ತ್ರಾಸ್ತ್ರಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಅನುಕೂಲವಾಗಲಿದೆ.