ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಂಪುಟ: ಐವರು ಉಪಮುಖ್ಯಮಂತ್ರಿ ಸೇರಿದಂತೆ 25 ಜನ ಸಚಿವರು ಪ್ರಮಾಣ ವಚನ

0
56

ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಸಂಪುಟದ 25 ಸಚಿವರು ರಾಜ್ಯಪಾಲ ಇ ಎಸ್‌ ಎಲ್‌ ನರಸಿಂಹನ್‌ ಮತ್ತು ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿ ಅವರ ಉಪಸ್ಥಿತಿಯಲ್ಲಿ ಜೂನ್ 8 ರ ಶನಿವಾರ ಪ್ರಮಾಣವಚನ ಸ್ವೀಕರಿಸಿದರು.

ಅಮರಾವತಿ: ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಸಂಪುಟದ 25 ಸಚಿವರು ರಾಜ್ಯಪಾಲ ಇ ಎಸ್‌ ಎಲ್‌ ನರಸಿಂಹನ್‌ ಮತ್ತು ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿ ಅವರ ಉಪಸ್ಥಿತಿಯಲ್ಲಿ ಜೂನ್ 8 ರ ಶನಿವಾರ ಪ್ರಮಾಣವಚನ ಸ್ವೀಕರಿಸಿದರು.

ವೆಲಗಪುಡಿಯ ರಾಜ್ಯ ಸಚಿವಾಲಯದಲ್ಲಿ ನಡೆದ ಸಮಾರಂಭದಲ್ಲಿ ನೂತನವಾಗಿ ರಚಿಸಲ್ಪಟ್ಟ ಸಂಪುಟಕ್ಕೆ ಐವರು ಉಪಮುಖ್ಯಮಂತ್ರಿಗಳು, ಮೂವರು ಮಹಿಳೆಯರು ಸೇರಿ 25 ಜನ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.

ಈ ಮೊದಲೇ ಜಗನ್‌ ಹೇಳಿದ್ದಂತೆ ಸಾಮಾಜಿಕ ಒಳಗೊಳ್ಳುವಿಕೆಯ ಆಧಾರದ ಮೇಲೆ ಸಂಪುಟ ರಚನೆ ಮಾಡಲಾಗಿದ್ದು, ಹಿಂದುಳಿದ ವರ್ಗಗಳಿಂದ 7 ಶಾಸಕರು, ಪರಿಶಿಷ್ಟ ಜಾತಿಯಿಂದ ಐವರು, ನಾಲ್ವರು ಕಾಪು ಮತ್ತು ರೆಡ್ಡಿ ಸಮುದಾಯದಿಂದ ಮತ್ತು ಪರಿಶಿಷ್ಟ ಪಂಗಡ ಮತ್ತು ಮುಸ್ಲಿಂ ಸಮುದಾಯದಿಂದ ತಲಾ ಒಬ್ಬೊಬ್ಬರು ಜಗನ್‌ ಸಂಪುಟದಲ್ಲಿ ಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ಹಿಂದಿನ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಸರ್ಕಾರದಲ್ಲಿ ಪ್ರಭಾವ ಹೊಂದಿದ್ದ ಕಮ್ಮ ಸಮುದಾಯಕ್ಕೆ ಈ ಬಾರಿ ಒಂದು ಸ್ಥಾನವನ್ನು ನೀಡಲಾಗಿದೆ. ಇದರೊಂದಿಗೆ ಹಿರಿಯ ನಾಯಕರಾದ ಬೋತ್ಸಾ ಸತ್ಯನಾರಾಯಣ, ಪಿನಿಪೆ ವಿಶ್ವರೂಪ್‌, ಪೆಡ್ಡಿರೆಡ್ಡಿ ರಾಮಚಂದ್ರ ರೆಡ್ಡಿ, ಪಿಲ್ಲಿ ಸುಭಾಷ್‌ ಚಂದ್ರ ಬೋಸ್‌ ಮತ್ತು ವೈ ಎಸ್‌ ರಾಜಶೇಖರ ರೆಡ್ಡಿ ಸಂಪುಟದಲ್ಲಿ ಸಚಿವರಾಗಿದ್ದ ಬಲಿನೇನಿ ಶ್ರೀನಿವಾಸ ರೆಡ್ಡಿ ಅವರನ್ನು ಜಗನ್‌ ಸಂಪುಟಕ್ಕೆ ಸೇರಿಕೊಂಡಿದ್ದಾರೆ.

ಜಗನ್‌ ಮೋಹನ್‌ ರೆಡ್ಡಿ ವಿಜಯವಾಡದ ಐಜಿಎಂಸಿ ಸ್ಟೇಡಿಯಂನಲ್ಲಿ ಮೇ 30ರಂದು ನಡೆದಿದ್ದ ಅದ್ಧೂರಿ ಸಮಾರಂಭದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. (ಏಜೆನ್ಸೀಸ್)