ಆದಾಯ ತೆರಿಗೆ ಸಲ್ಲಿಕೆ ದ್ವಿಗುಣ, ರೀಫಂಡ್‌ ಪ್ರಮಾಣವೂ ಏರಿಕೆ

0
13

ಆದಾಯ ತೆರಿಗೆ ವಿಷಯದಲ್ಲಿ ಕೇಂದ್ರ ಸರಕಾರ ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಇದರ ಜತೆಗೆ ಆದಾಯ ತೆರಿಗೆ ರಿಟರ್ನ್ಸ್‌ ಸಲ್ಲಿಕೆಗೆ ನೀಡಲಾಗಿದ್ದ ಗಡುವನ್ನು ಆಗಸ್ಟ್‌ 31ರವರೆಗೆ ವಿಸ್ತರಿಸಲಾಗಿದೆ. ಈ ನಡುವೆ ಆದಾಯ ತೆರಿಗೆ ರಿಟರ್ನ್ಸ್‌ ಸಲ್ಲಿಸುವವರ ಸಂಖ್ಯೆ ದ್ವಿಗುಣಗೊಂಡಿದೆ.

ಹೊಸದಿಲ್ಲಿ: ಆದಾಯ ತೆರಿಗೆ ವಿಷಯದಲ್ಲಿ ಕೇಂದ್ರ ಸರಕಾರ ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಇದರ ಜತೆಗೆ ಆದಾಯ ತೆರಿಗೆ ರಿಟರ್ನ್ಸ್‌ ಸಲ್ಲಿಕೆಗೆ ನೀಡಲಾಗಿದ್ದ ಗಡುವನ್ನು ಆಗಸ್ಟ್‌ 31ರವರೆಗೆ ವಿಸ್ತರಿಸಲಾಗಿದೆ. ಈ ನಡುವೆ ಆದಾಯ ತೆರಿಗೆ ರಿಟರ್ನ್ಸ್‌ ಸಲ್ಲಿಸುವವರ ಸಂಖ್ಯೆ ದ್ವಿಗುಣಗೊಂಡಿದೆ. 

ಪ್ರಸಕ್ತ ಸಾಲಿನಲ್ಲಿ ಇದುವೆಗೆ ಮೂರು ಕೋಟಿ ಆದಾಯ ತೆರಿಗೆ ರಿಟರ್ನ್ಸ್‌ ಸಲ್ಲಿಸಲಾಗಿದೆ. ಇದು ಕಳೆದ ಸಾಲಿಗೆ ಹೋಲಿಸಿದರೆ ಅತ್ಯಧಿಕ. 

ಅಲ್ಲದೇ ತೆರಿಗೆ ರೀಫಂಡ್‌ ಆಗಿರುವ ಪ್ರಮಾಣ ಕೂಡ ಏರಿಕೆಯಾಗಿದೆ. ಆನ್‌ಲೈನ್‌ ಮೂಲಕ ಸಲ್ಲಿಕೆಯಾಗಿರುವ ಆದಾಯ ತೆರಿಗೆ ರಿಟರ್ನ್ಸ್‌ನಲ್ಲಿ ಈಗಾಗಲೇ ಶೇಕಡ 60ರಷ್ಟರ ರೀಫಂಡ್ ಪ್ರಕ್ರಿಯೆ ಶುರುವಾಗಿದೆ. 

ರೀಫಂಡ್‌ನಲ್ಲಿ ಯಾವುದೇ ವಿಳಂಬ ಆಗದಂತೆ ನೋಡಿಕೊಳ್ಳಬೇಕೆಂದು ಈಗಾಗಲೇ ಎನ್‌ಡಿಎ ಸರಕಾರ ಸೂಚನೆ ನೀಡಿದೆ. 

ಕಳೆದ ಜುಲೈ 26 ರ ಗುರುವಾರದವರೆಗೆ 3.07 ಕೋಟಿ ಆದಾಯ ತೆರಿಗೆ ರಿಟರ್ನ್ಸ್‌ ಸಲ್ಲಿಕೆಯಾಗಿದೆ. ಇದೇ ಅವಧಿಯಲ್ಲಿ ಕಳೆದ ವರ್ಷ ಅಂದರೆ ಜುಲೈ 26, 2017ರವೆಗೆ 1.7 ಕೋಟಿ ಆದಾಯ ತೆರಿಗೆ ರಿಟರ್ನ್ಸ್‌ ಸಲ್ಲಿಕೆಯಾಗಿತ್ತು.