ಆನ್‌ಲೈನ್‌ನಲ್ಲಿ ಮದ್ಯ ಮಾರಾಟ : ಮಹಾರಾಷ್ಟ್ರ ಸರ್ಕಾರ ನಿರ್ಧಾರ

0
126

ಆನ್‌ಲೈನ್‌ನಲ್ಲಿ ಮದ್ಯ ಮಾರಾಟ ಹಾಗೂ ಹೋಮ್‌ ಡೆಲಿವರಿಗೆ ಅವಕಾಶ ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ.

ಮುಂಬೈ (ಪಿಟಿಐ): ಆನ್‌ಲೈನ್‌ನಲ್ಲಿ ಮದ್ಯ ಮಾರಾಟ ಹಾಗೂ ಹೋಮ್‌ ಡೆಲಿವರಿಗೆ ಅವಕಾಶ ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. 

ಕುಡಿದು ವಾಹನ ಓಡಿಸುವ ಪ್ರಕರಣಗಳನ್ನು ತಡೆಗಟ್ಟುವಲ್ಲಿ ಇದು ಮಹತ್ವದ ಹೆಜ್ಜೆ ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ. ಈ ನಿರ್ಧಾರ ಎಂದಿನಿಂದ ಜಾರಿಗೆ ಬರಲಿದೆ ಎಂಬುದನ್ನು ಅಬಕಾರಿ ಸಚಿವ ಚಂದ್ರಶೇಖರ ಬವಾಂಕುಲೆ ಅವರು ಖಚಿತವಾಗಿ ತಿಳಿಸಿಲ್ಲ. 

ಆದಾಯವನ್ನು ಹೆಚ್ಚಿಸಿಕೊಳ್ಳುವುದೂ ಈ ನಿರ್ಧಾರದ ಹಿಂದಿರುವ ಮತ್ತೊಂದು ಕಾರಣ ಎಂದು ಸರ್ಕಾರದ ಅಧಿಕಾರಿಯೊಬ್ಬರು ಹೇಳಿದ್ದಾರೆ. ಪ್ರಮುಖ ಇ–ಕಾಮರ್ಸ್ ಕಂಪನಿಗಳು ಆನ್‌ಲೈನ್‌ನಲ್ಲಿ ಮದ್ಯ ಮಾರಾಟಕ್ಕೆ ಉತ್ಸುಕವಾಗಿವೆ.