‘ಆರೋಗ್ಯ ಕರ್ನಾಟಕ’ ಯೋಜನೆ :4.25 ಲಕ್ಷ ಆರೋಗ್ಯ ಕಾರ್ಡ್‌ ವಿತರಣೆ

0
487

‘ಆರೋಗ್ಯ ಕರ್ನಾಟಕ’ ಯೋಜನೆಯಡಿ ಈವರೆಗೆ 4.25 ಲಕ್ಷ ಆರೋಗ್ಯ ಕಾರ್ಡ್‌ಗಳನ್ನು ವಿತರಿಸಲಾಗಿದೆ.

ಬೆಂಗಳೂರು: ‘ಆರೋಗ್ಯ ಕರ್ನಾಟಕ’ ಯೋಜನೆಯಡಿ ಈವರೆಗೆ 4.25 ಲಕ್ಷ ಆರೋಗ್ಯ ಕಾರ್ಡ್‌ಗಳನ್ನು ವಿತರಿಸಲಾಗಿದೆ.

ಮೊದಲ ಹಂತದಲ್ಲಿ 11 ಪ್ರಮುಖ ಸಾರ್ವಜನಿಕ ಆಸ್ಪತ್ರೆಗಳಲ್ಲಿ ರೋಗಿಗಳ ನೋಂದಣಿ ಮಾಡಿ ಆರೋಗ್ಯ ಕಾರ್ಡ್‌ಗಳ  ವಿತರಣೆ ಮಾಡಲಾಗುತ್ತಿದೆ ಜಿಲ್ಲಾ ಆಸ್ಪತ್ರೆಗಳು, ತಾಲ್ಲೂಕು ಆಸ್ಪತ್ರೆಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ರೋಗಿಗಳ ನೋಂದಣಿಯನ್ನು ಹಂತ–ಹಂತವಾಗಿ ಜಾರಿಗೊಳಿಸಲಾಗುತ್ತದೆ ಎಂದು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಕಾರ್ಯಕಾರಿ ನಿರ್ದೇಶಕಿ ಎನ್‌.ಟಿ.ಆಬ್ರೂ ತಿಳಿಸಿದ್ದಾರೆ.

ಕಾರ್ಡ್‌ಗಳ ಪೂರ್ಣ ವಿತರಣೆ ಆಗುವವರೆಗೆ ರೋಗಿಗಳು ಚಿಕಿತ್ಸೆಗಾಗಿ ಪಡಿತರ ಚೀಟಿ ಮತ್ತು ಆಧಾರ್‌ ಕಾರ್ಡ್‌ಗಳನ್ನು      ಬಳಸಿ ಈ ಯೋಜನೆಯಡಿ ಸೌಲಭ್ಯ ಪಡೆಯಬಹುದು.