ಉಗ್ರ ಮಸೂದ್​ ಅಜರ್​ ಆಸ್ತಿಗಳನ್ನು ಜಪ್ತಿ ಮಾಡಲು ಫ್ರಾನ್ಸ್​ ನಿರ್ಧಾರ

0
442

ಜೈಷ್-ಎ-ಮೊಹಮ್ಮದ್ (ಜೆಇಎಂ) ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್​ನನ್ನು ಜಾಗತಿಕ ಉಗ್ರನೆಂದು ಘೋಷಿಸುವ ಪ್ರಸ್ತಾವನೆಗೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಚೀನಾ ನಾಲ್ಕನೇ ಬಾರಿ ಅಡ್ಡಗಾಲು ಹಾಕಿದ ಬೆನ್ನಲ್ಲೇ ಮಹತ್ವದ ಬೆಳವಣಿಗೆಯೊಂದರಲ್ಲಿ ಫ್ರಾನ್ಸ್​ನಲ್ಲಿರುವ ಮಸೂದ್​ ಅಜರ್​ನ ಆಸ್ತಿಗಳನ್ನು ಜಪ್ತಿ ಮಾಡಲು ಫ್ರಾನ್ಸ್​ ಸರ್ಕಾರ ತೀರ್ಮಾನ ತೆಗೆದುಕೊಂಡಿದೆ.

ನವದೆಹಲಿ: ಜೈಷ್-ಎ-ಮೊಹಮ್ಮದ್ (ಜೆಇಎಂ) ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್​ನನ್ನು ಜಾಗತಿಕ ಉಗ್ರನೆಂದು ಘೋಷಿಸುವ ಪ್ರಸ್ತಾವನೆಗೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಚೀನಾ ನಾಲ್ಕನೇ ಬಾರಿ ಅಡ್ಡಗಾಲು ಹಾಕಿದ ಬೆನ್ನಲ್ಲೇ ಮಹತ್ವದ ಬೆಳವಣಿಗೆಯೊಂದರಲ್ಲಿ ಫ್ರಾನ್ಸ್​ನಲ್ಲಿರುವ ಮಸೂದ್​ ಅಜರ್​ನ ಆಸ್ತಿಗಳನ್ನು ಜಪ್ತಿ ಮಾಡಲು ಫ್ರಾನ್ಸ್​ ಸರ್ಕಾರ ತೀರ್ಮಾನ ತೆಗೆದುಕೊಂಡಿದೆ.

ಮಸೂದ್​ ಅಜರ್​ನನ್ನು ಜಾಗತಿಕ ಉಗ್ರನೆಂದು ಘೋಷಿಸಲು ಒತ್ತಾಯಿಸಿ ಫೆ. 27ರಂದು ಅಮೆರಿಕ, ಬ್ರಿಟನ್, ಫ್ರಾನ್ಸ್ ವಿಶ್ವಸಂಸ್ಥೆಗೆ ಅರ್ಜಿ ಸಲ್ಲಿಸಿದ್ದವು. ಇದಕ್ಕೆ ಹತ್ತಕ್ಕೂ ಹೆಚ್ಚು ರಾಷ್ಟ್ರಗಳು ಬೆಂಬಲ ನೀಡಿದ್ದವು. ಆದರೆ, ಚೀನಾ ವಿಟೋ ಅಧಿಕಾರ ಚಲಾಯಿಸಿ, ಪ್ರಸ್ತಾವನೆಗೆ ತಡೆ ನೀಡಿದೆ.

ಈ ಹಿನ್ನೆಲೆಯಲ್ಲಿ ಮಸೂದ್​ ಅಜರ್​ಗೆ ಮರ್ಮಾಘಾತ ನೀಡಲು ಫ್ರಾನ್ಸ್​ ನಿರ್ಧರಿಸಿ, ತಮ್ಮ ದೇಶದಲ್ಲಿರುವ ಮಸೂದ್​ ಅಜರ್​ ಮತ್ತು ಆತನ ಸಂಘಟನೆಗಳ ಮೇಲೆ ಆರ್ಥಿಕ ನಿರ್ಬಂಧ ಹೇರುವುದು ಹಾಗೂ ಆತನ ಆಸ್ತಿಗಳನ್ನು ಜಪ್ತಿ ಮಾಡಲು ತೀರ್ಮಾನಿಸಿದೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಫ್ರಾನ್ಸ್​​ ಸರ್ಕಾರ ನಾವು ಉಗ್ರರ ವಿರುದ್ಧದ ಹೋರಾಟದಲ್ಲಿ ನಾವು ಭಾರತಕ್ಕೆ ಸದಾ ಬೆಂಬಲಿಸುತ್ತೇವೆ ಎಂದು ತಿಳಿಸಿದೆ. (ಏಜೆನ್ಸೀಸ್​)