ಉದ್ಯೋಗಿಗಳ ಭವಿಷ್ಯ ನಿಧಿ ಮೇಲಿನ ಬಡ್ಡಿದರ ಹೆಚ್ಚಳ

0
676

ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯು(ಇಪಿಎಫ್‌ಒ) ಭವಿಷ್ಯ ನಿಧಿ ಮೇಲಿನ ಬಡ್ಡಿದರವನ್ನು ಶೇ.8.55 ರಿಂದ 8.65ಕ್ಕೆ ಏರಿಕೆ ಮಾಡಿದ್ದು, ಇದರಿಂದಾಗಿ ಆರು ಕೋಟಿ ಚಂದಾದಾರರಿಗೆ ಲಾಭವಾಗಲಿದೆ.

ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯು(ಇಪಿಎಫ್‌ಒ) ಭವಿಷ್ಯ ನಿಧಿ ಮೇಲಿನ ಬಡ್ಡಿದರವನ್ನು ಶೇ.8.55 ರಿಂದ 8.65ಕ್ಕೆ ಏರಿಕೆ ಮಾಡಿದ್ದು, ಇದರಿಂದಾಗಿ ಆರು ಕೋಟಿ ಚಂದಾದಾರರಿಗೆ ಲಾಭವಾಗಲಿದೆ.

ಇಪಿಎಫ್‌ಒದ ಕೇಂದ್ರ ಮಂಡಳಿಯ ಟ್ರಸ್ಟಿಗಳ (ಸಿಬಿಟಿ) ಸಭೆಯ ಬಳಿಕ ಮಾತನಾಡಿದ ಕಾರ್ಮಿಕ ಸಚಿವ ಸಂತೋಷ್‌ ಗಂಗ್ವಾರ್‌, ಸಿಬಿಟಿಯ ಎಲ್ಲ ಸದಸ್ಯರು ಪ್ರಸಕ್ತ ವರ್ಷದಲ್ಲಿ ಪಿಎಫ್‌ ಮೇಲಿನ ಬಡ್ಡಿದರ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಈ ಪ್ರಸ್ತಾವನೆಯನ್ನು ಕೇಂದ್ರ ಹಣಕಾಸು ಸಚಿವಾಲಯಕ್ಕೆ ಕಳುಹಿಸಲಾಗುವುದು. 2017–18ರಲ್ಲಿ ಬಡ್ಡಿದರ 8.55 ರಷ್ಟಿತ್ತು ಎಂದು ತಿಳಿಸಿದ್ದಾರೆ.

ಕಾರ್ಮಿಕ ಸಚಿವರ ನೇತೃತ್ವದ ಇಪಿಎಫ್‌ಒದ ಕೇಂದ್ರ ಮಂಡಳಿಯ ಟ್ರಸ್ಟಿಗಳು ಪಿಎಫ್‌ ಠೇವಣಿಗಳ ಮೇಲೆ ಹಣಕಾಸಿನ ವರ್ಷಕ್ಕೆ ಬಡ್ಡಿ ದರವನ್ನು ನಿಗದಿ ಪಡಿಸುವ ಪ್ರಮುಖ ನಿರ್ಣಯವನ್ನು ತೆಗೆದುಕೊಳ್ಳುತ್ತಾರೆ.

ಒಮ್ಮೆ ನಿರ್ಣಯವಾದ ಪ್ರಸ್ತಾವನೆಗೆ ಹಣಕಾಸು ಸಚಿವಾಲಯದ ಒಪ್ಪಿಗೆ ದೊರಕಿದ ನಂತರವಷ್ಟೇ ಪಿಎಫ್‌ ಚಂದಾದಾರರ ಖಾತೆಗಳಿಗೆ ಬಡ್ಡಿದರವನ್ನು ಸಂದಾಯ ಮಾಡಲಾಗುತ್ತದೆ. (ಏಜೆನ್ಸೀಸ್)