ಎನ್‌ಟಿಎ ಮಹಾ ನಿರ್ದೇಶಕರಾಗಿ ವಿನೀತ್‌ ಜೋಶಿ ನೇಮಕ

0
61

ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ(ಎನ್‌ಟಿಎ) ನೂತನ ಮಹಾ ನಿರ್ದೇಶಕರನ್ನಾಗಿ ಹಿರಿಯ ಐಎಎಸ್‌ ಅಧಿಕಾರಿ ವಿನೀತ್‌ ಜೋಶಿ ಅವರನ್ನು ನೇಮಿಸಲಾಗಿದೆ.

ಜೋಶಿ ಅವರ ಅವಧಿ ಮುಂದಿನ ಐದು ವರ್ಷಗಳು ಎಂದು ಉದ್ಯೋಗ ಮತ್ತು ತರಬೇತಿ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ. ಜೋಶಿ ಅವರು ಮಣಿಪುರ ಕೆಡರ್‌ನ 1992ನೇ ಬ್ಯಾಚ್‌ನ ಅಧಿಕಾರಿಯಾಗಿದ್ದಾರೆ.

ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ಪ್ರವೇಶ ಪರೀಕ್ಷೆಗಳನ್ನು ನಡೆಸಲಿದೆ.

ಹಣಕಾಸು ಸಚಿವ ಅರುಣ್‌ ಜೇಟ್ಲಿ 2017–18ನೇ ಸಾಲಿನ ಬಜೆಟ್‌ನಲ್ಲಿ ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ಎಲ್ಲ ಪ್ರವೇಶ ಪರೀಕ್ಷೆಗಳನ್ನು ನಡೆಸಲು ಸ್ವಾಯತ್ತ ಸಂಸ್ಥೆ ಸ್ಥಾಪಿಸಲಾಗುವುದು ಎಂದು ಘೋಷಿಸಿದ್ದರು. ಕಳೆದ ವರ್ಷ ನವೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಸ್ಥಾಪನೆಗೆ ಅನುಮೊದನೆ ದೊರೆತಿತ್ತು.

ಪ್ರವೇಶ ಪರೀಕ್ಷೆಗಳ ಕುರಿತು ಅಗತ್ಯ ನೀತಿ ನಿರೂಪಣೆ ರಚಿಸಲು ಒಂಬತ್ತು ಶಿಕ್ಷಣ ತಜ್ಞರನ್ನು ಒಳಗೊಂಡ ಸಮಿತಿಯು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಗೆ ಸಲಹೆ ನೀಡಲಿದೆ.