ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಪ್ರಮಾಣಪತ್ರಕ್ಕೆ ಒಂದೇ ದಾಖಲೆ : ಸಿಬಿಎಸ್‌ಇ

0
529

ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರಸಕ್ತ ಸಾಲಿನಿಂದ ಅಂಕಪಟ್ಟಿ ಮತ್ತು ಪ್ರಮಾಣಪತ್ರವನ್ನೊಳಗೊಂಡ ಒಂದೇ ದಾಖಲೆಯನ್ನು ನೀಡಲಾಗುವುದು ಎಂದು ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) ತಿಳಿಸಿದೆ. ‌

ನವದೆಹಲಿ (ಪಿಟಿಐ): ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರಸಕ್ತ ಸಾಲಿನಿಂದ ಅಂಕಪಟ್ಟಿ ಮತ್ತು ಪ್ರಮಾಣಪತ್ರವನ್ನೊಳಗೊಂಡ ಒಂದೇ ದಾಖಲೆಯನ್ನು ನೀಡಲಾಗುವುದು ಎಂದು ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) ತಿಳಿಸಿದೆ. ‌

ಮಂಡಳಿಯ ಪರೀಕ್ಷಾ ಸಮಿತಿ ಈ ನಿರ್ಧಾರ ತೆಗೆದುಕೊಂಡಿದ್ದು, ಇದಕ್ಕೆ ಆಡಳಿತ ಮಂಡಳಿಯ ಅನುಮೋದನೆ ದೊರೆತಿದೆ.

ಈ ದಾಖಲೆಯನ್ನು ಪ್ರಮಾಣಪತ್ರವೆಂದು ಪರಿಗಣಿಸಲಾಗುವುದು. ವಿದ್ಯಾರ್ಥಿಗಳು ಶಾಲಾ ಮಂಡಳಿ ಸೂಚಿಸಿದ ಅಗತ್ಯ ದಾಖಲೆಗಳನ್ನು ನೀಡಿ ಇದನ್ನು ಪಡೆದುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ಪಿಯುಸಿ ವಿದ್ಯಾರ್ಥಿಗಳಿಗೆ ಇದು ಅನ್ವಯವಾಗುವುದಿಲ್ಲ. ಅವರಿಗೆ ಈ ಎರಡು ದಾಖಲೆಗಳನ್ನು ಪ್ರತ್ಯೇಕವಾಗಿಯೇ ನೀಡಲಾಗುವುದು. 

ಒಂದು ವೇಳೆ ವಿದ್ಯಾರ್ಥಿಯು ಇನ್ನೂ ಹೆಚ್ಚಿನ ಅಂಕಗಳನ್ನು ಗಳಿಸಲು ಸುಧಾರಣಾ ಪರೀಕ್ಷೆ (ಮತ್ತೊಮ್ಮೆ ಪರೀಕ್ಷೆ ಬರೆಯುವುದು) ತೆಗೆದುಕೊಂಡರೆ, ಪತ್ಯೇಕ ಪ್ರಮಾಣಪತ್ರ ನೀಡುವುದಿಲ್ಲ. ಆದರೆ, ಅಂಕಗಳ ವಿವರಗಳನ್ನು ಒಳಗೊಂಡ ಪಟ್ಟಿ ನೀಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.