ಎಸ್‌ಬಿಐ ಉಳಿತಾಯ ಖಾತೆಯ ಮಾಸಿಕ ಕನಿಷ್ಠ ಮಿತಿ ₹3,000ಕ್ಕೆ ಇಳಿಕೆ

0
21

ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾದ ಉಳಿತಾಯ ಖಾತೆಯಲ್ಲಿ ತಿಂಗಳ ಕನಿಷ್ಠ ಮೊತ್ತದ ಮಿತಿಯನ್ನು (ಎಂಎಬಿ) ₹5,000ದಿಂದ ₹3,000ಕ್ಕೆ ಇಳಿಕೆ ಮಾಡಲಾಗಿದೆ. ಇದು ಅಕ್ಟೋಬರ್‌ನಿಂದ ಜಾರಿಗೆ ಬರಲಿದೆ ಎಂದು ಬ್ಯಾಂಕ್‌ನ ಪ್ರಕಟಣೆ ತಿಳಿಸಿದೆ.

ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾದ  ಉಳಿತಾಯ ಖಾತೆಯಲ್ಲಿ ತಿಂಗಳ ಕನಿಷ್ಠ ಮೊತ್ತದ ಮಿತಿಯನ್ನು (ಎಂಎಬಿ) ₹5,000 ದಿಂದ ₹3,000ಕ್ಕೆ ಇಳಿಕೆ ಮಾಡಿದ್ದು, ಇದು ಅಕ್ಟೋಬರ್‌ನಿಂದ ಜಾರಿಗೆ ಬರಲಿದೆ ಎಂದು ಬ್ಯಾಂಕ್‌ನ ಪ್ರಕಟಣೆ ತಿಳಿಸಿದೆ. ಈ ನಿಯಮ ಪಾಲಿಸದೆ ಇದ್ದಲ್ಲಿ ವಿಧಿಸುವ ದಂಡದ ಮೊತ್ತವನ್ನು ಪರಿಷ್ಕರಿಸಲಾಗಿದೆ. ಕನಿಷ್ಠ ಮೊತ್ತ ಇಲ್ಲದೆ ಇದ್ದರೆ ₹30ರಿಂದ ₹50ರವರೆಗೆ ದಂಡ ವಿಧಿಸಲಾಗುತ್ತದೆ.

ಮಹಾನಗರಗಳು ಹಾಗೂ ನಗರ ಪ್ರದೇಶಗಳಲ್ಲಿ ಒಂದೇ ರೀತಿಯ ನಿಯಮ ಅನುಸರಿಸಬೇಕೆಂದು ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೊದಲು ಮಹಾನಗರ ಪ್ರದೇಶಗಳಲ್ಲಿ ₹5,000 ಹಾಗೂ ನಗರ ಪ್ರದೇಶಗಳಲ್ಲಿ ₹3,000 ಕನಿಷ್ಠ ಮಿತಿ ಇತ್ತು.

ಪಿಂಚಣಿದಾರರಿಗೆ, ಸರ್ಕಾರದ ಕಲ್ಯಾಣಾಭಿವೃದ್ಧಿ ಯೋಜನೆಗಳ ಫಲಾನುಭವಿಗಳಿಗೆ ಇದು ಅನ್ವಯವಾಗುವುದಿಲ್ಲ.