ಎಸ್‌ಸಿ ಎಸ್‌ಟಿ ನೌಕರರ ಬಡ್ತಿ ಮೀಸಲಾತಿ ಕಾಯಿದೆ ಜಾರಿಗೆ ರಾಜ್ಯ ಸಚಿವ ಸಂಪುಟ ಅಸ್ತು

0
846

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯದ ಸರ್ಕಾರಿ ನೌಕರರ ಮುಂಬಡ್ತಿ ಮೀಸಲಾತಿ ವಿಧೇಯಕ ಜಾರಿಗೆ ರಾಜ್ಯ ಸಚಿವ ಸಂಪುಟ ಸಮ್ಮತಿ ಸೂಚಿಸಿದೆ.

ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯದ ಸರ್ಕಾರಿ ನೌಕರರ ಮುಂಬಡ್ತಿ ಮೀಸಲಾತಿ ವಿಧೇಯಕ ಜಾರಿಗೆ ರಾಜ್ಯ ಸಚಿವ ಸಂಪುಟ ಸಮ್ಮತಿ ಸೂಚಿಸಿದೆ. 

ಇಂದು(ಜನೇವರಿ 30) ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ, ನ್ಯಾಯಾಲಯದ ಆದೇಶಕ್ಕೆ ಒಳಪಟ್ಟು ವಿಧೇಯಕ ಅನುಷ್ಠಾನಕ್ಕೆ ಅನುಮೋದನೆ ನೀಡಲಾಗಿದೆ. 

ಸಂಪುಟ ಸಭೆಯ ಬಳಿಕ ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. 

ಈಗಾಗಲೇ ಪರಿಶಿಷ್ಟ ಜಾತಿ, ಪಂಗಡ ಬಡ್ತಿ ಮೀಸಲಾತಿ ಮಸೂದಗೆ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ. ಹೀಗಾಗಿ ಕಾಯಿದೆ ಜಾರಿಗೊಳಿಸಲಾಗುತ್ತದೆ. ಸುಪ್ರೀಂ ಕೋರ್ಟ್‌ನ ಅಂತಿಮ ತೀರ್ಪಿಗೆ ಒಳಪಡುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು. 

ಕಾಯಿದೆ ಅನುಷ್ಠಾನಕ್ಕೆ ಜೇಷ್ಠತಾ ಪಟ್ಟಿ ಸಿದ್ಧಪಡಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗುವುದು ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಕಾಯಿದೆ ಬಗ್ಗೆ ಈಗಾಗಲೇ ಹಿರಿಯ ವಕೀಲ ಮುಕುಲ್‌ ರೊಹ್ಟಗಿ ಅಭಿಪ್ರಾಯಪಡಲಾಗಿದೆ ಎಂದು ಸಚಿವರು ತಿಳಿಸಿದರು. 

ಕೇಂದ್ರ ಸರ್ಕಾರದ ಸರ್ವ ಶಿಕ್ಷಣ ಅಭಿಯಾನ ಮತ್ತು ಮಾಧ್ಯಮ ಶಿಕ್ಷಣ ಅಭಿಯಾನವನ್ನು ವಿಲೀನಗೊಳಿಸಿ ಕರ್ನಾಟಕ ಸಮಗ್ರ ಶಿಕ್ಷಣ ಅಭಿಯಾನ ಆರಂಭಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ. 

ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಗಣಿತ ಅಧ್ಯಯನ ಕಿಟ್ ವಿತರಿಸಲು ಸಂಪುಟ ಸಮ್ಮತಿಸಿದೆ ಎಂದು ಸಂಸದೀಯ ವ್ಯವಹಾರ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.