ಎಸ್‌ಸಿ ಎಸ್‌ಟಿ ಬಡ್ತಿ ಮೀಸಲಾತಿ ಕಾಯಿದೆ: ಸುಪ್ರೀಂ ಕೋರ್ಟ್‌ ಅಸ್ತು

0
33

ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ, ಪಂಗಡದ ನೌಕರರಿಗೆ ಸಿಹಿ ಸುದ್ದಿ ಬಂದಿದೆ. ಹಲವಾರು ದಿನಗಳ ಬೇಡಿಕೆಯಾಗಿರುವ ಮೀಸಲಾತಿ ಆಧಾರದ ಮೇಲೆ ಬಡ್ತಿ ನೀಡುವ ಕಾಯಿದೆಗೆ ಸುಪ್ರೀಂ ಕೋರ್ಟ್‌ ಹಸಿರು ನಿಶಾನೆ ತೋರಿದೆ.

ಹೊಸದಿಲ್ಲಿ: ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ, ಪಂಗಡದ ನೌಕರರಿಗೆ ಸಿಹಿ ಸುದ್ದಿ ಬಂದಿದೆ. ಹಲವಾರು ದಿನಗಳ ಬೇಡಿಕೆಯಾಗಿರುವ ಮೀಸಲಾತಿ ಆಧಾರದ ಮೇಲೆ ಬಡ್ತಿ ನೀಡುವ ಕಾಯಿದೆಗೆ ಸುಪ್ರೀಂ ಕೋರ್ಟ್‌ ಹಸಿರು ನಿಶಾನೆ ತೋರಿದೆ. 

ಮೀಸಲಾತಿಗಾಗಿ ಕಾಯುತ್ತಿರುವ ನೂರಾರು ಎಸ್‌ಸಿ ಎಸ್‌ಟಿ  ನೌಕರರಿಗೆ ಸುಪ್ರೀಂ ಕೋರ್ಟ್‌ನ ಈ ತೀರ್ಪು ನೆರವಾಗಲಿದೆ.  ಸೇವಾ ಹಿರಿತನದ ಆಧಾರದಲ್ಲಿ ಬಡ್ತಿ ಪಡೆಯಬೇಕಾಗಿದ್ದ ಸಾಮಾನ್ಯ ವರ್ಗದ ನೌಕರರರಿಗೆ ಹಿನ್ನಡೆಯಾಗಲಿದೆ ಎಂಬ ಮಾತುಗಳು ಕೇಳಿಬಂದಿವೆ.

ಎಸ್‌ಸಿ ಎಸ್‌ಟಿ ಬಸ್ತಿ ಮೀಸಲಾತಿಗೆ ಕರ್ನಾಟಕ ರಾಜ್ಯ ಸಚಿವ ಸಂಪುಟ ಕಳೆದ ಫೆಬ್ರವರಿಯಲ್ಲಿ ಅನುಮೋದನೆ ನೀಡಿತ್ತು. ಈ ಕಾಯಿದೆಗೆ ರಾಷ್ಟ್ರಪತಿಗಳ ಅನುಮೋದನೆ ಕೂಡ ಸಿಕ್ಕಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. 

ಸುಪ್ರೀಂ ಕೋರ್ಟ್‌ ತೀರ್ಪಿಗೆ ಅನುಗುಣವಾಗಿ ಕಾಯಿದೆಯನ್ನು ಜಾರಿಗೆ ತರಲಾಗುವುದು ಎಂದು ರಾಜ್ಯ ಸರಕಾರ ಈಗಾಗಲೇ ಸ್ಪಷ್ಟಪಡಿಸಿದೆ. 

ಪರಿಶಿಷ್ಟ ಜಾತಿ ಮತ್ತು ಪಂಗಡದ ಬಡ್ತಿ ಮೀಸಲು ಸಂಬಂಧ ರಾಜ್ಯ ಸರಕಾರ ತಂದಿದ್ದ ಕಾನೂನಿಗೆ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪು ಸ್ವಾಗತಾರ್ಹ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು. 

ಯಾರಿಗೂ ಹಿಂಬಡ್ತಿ ಆಗದಂತೆಯೂ ಸರಕಾರ ಎಚ್ಚರ ವಹಿಸಲಾಗುತ್ತೆ. ಕಾನೂನು ಇಲಾಖೆಯೊಂದಿಗೆ ಚರ್ಚಿಸಿ ಅನುಷ್ಠಾನ ಮಾಡಲಾಗುತ್ತದೆ. ಎಂದು ಜಿ ಪರಮೇಶ್ವರ್‌ ತಿಳಿಸಿದರು. 

ದಲಿತರಿಗೆ, ಹಿಂದುಳಿದವರಿಗೆ ಅನ್ಯಾಯವಾಗಬಾರದೆಂದು ಬಡ್ತಿಯಲ್ಲಿ ಮೀಸಲಾತಿ ತಂದಿದ್ವಿ. ಆದರೆ ಅದನ್ನು ಪ್ರಶ್ನಿಸಿ ಪವಿತ್ರ ಎಂಬುವರು ಅಪೀಲು ಹೋಗಿದ್ದರು. ಇದೀಗ ನಾವು ತೆಗೆದುಕೊಂಡ ನಿರ್ಣಯವನ್ನ ಸುಪ್ರೀಂ ಕೋಟ್೯ ಎತ್ತಿ ಹಿಡಿದಿದೆ. ಸರ್ವರಿಗೂ ನ್ಯಾಯ ಒದಗಿಸಲು ಕಾಂಗ್ರೆಸ್ ಸರಕಾರ ಕಟಿಬದ್ಧವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮ್ಯಯ ತಿಳಿಸಿದರು.