ಎ.ಟಿ.ಪಿ ರ‍್ಯಾಂಕಿಂಗ್‌: ಎರಡನೇ ಸ್ಥಾನಕ್ಕೇರಿದ ನೊವಾಕ್‌

0
93

ಸರ್ಬಿಯಾದ ನೊವಾಕ್‌ ಜೊಕೊವಿಚ್‌, ಸೋಮವಾರ ಬಿಡುಗಡೆಯಾಗಿರುವ ಪುರುಷರ ಸಿಂಗಲ್ಸ್‌ ವಿಭಾಗದ ವಿಶ್ವ ಕ್ರಮಾಂಕ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ.

ಪ್ಯಾರಿಸ್‌ (ಎಎಫ್‌ಪಿ): ಸರ್ಬಿಯಾದ ನೊವಾಕ್‌ ಜೊಕೊವಿಚ್‌, ಅಕ್ಟೋಬರ್ 15 ರ ಸೋಮವಾರ ಬಿಡುಗಡೆಯಾಗಿರುವ ಪುರುಷರ ಸಿಂಗಲ್ಸ್‌ ವಿಭಾಗದ ವಿಶ್ವ ಕ್ರಮಾಂಕ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ.

ಭಾನುವಾರ ನಡೆದ ಶಾಂಘೈ ಮಾಸ್ಟರ್ಸ್‌ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದಿದ್ದ ನೊವಾಕ್‌ ಒಟ್ಟು ಪಾಯಿಂಟ್ಸ್‌ ಅನ್ನು 7445ಕ್ಕೆ ಹೆಚ್ಚಿಸಿಕೊಂಡು ಈ ಸಾಧನೆ ಮಾಡಿದ್ದಾರೆ. ಸ್ವಿಟ್ಜರ್‌ಲೆಂಡ್‌ನ ರೋಜರ್‌ ಫೆಡರರ್‌ ಮೂರನೇ ಸ್ಥಾನಕ್ಕೆ ಇಳಿದಿದ್ದಾರೆ. ಸ್ಪೇನ್‌ನ ರಫೆಲ್‌ ನಡಾಲ್‌ ಅಗ್ರಸ್ಥಾನ ಕಾಪಾಡಿಕೊಂಡಿದ್ದಾರೆ.

ಮಹಿಳೆಯರ ಸಿಂಗಲ್ಸ್‌ ವಿಭಾಗದಲ್ಲಿ ರುಮೇನಿಯಾದ ಸಿಮೊನಾ ಹಲೆಪ್‌ ಅಗ್ರಸ್ಥಾನದಲ್ಲಿದ್ದಾರೆ.