ಏಕದಿನದಲ್ಲೂ ಭಾರತವೇ ನಂ.1

0
15

ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ನೂತನ ಏಕದಿನ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತ ಅಗ್ರಸ್ಥಾನಕ್ಕೇರಿದೆ.

ಡರ್ಬನ್‌ನಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಆರು ವಿಕೆಟುಗಳ ಅಂತರದ ಗೆಲುವು ದಾಖಲಿಸಿತ್ತು. ಈ ಮೂಲಕ ಆರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಅಂತರದ ಮಹತ್ವದ ಮುನ್ನಡೆ ದಾಖಲಿಸಿತ್ತು.

ಇದರೊಂದಿಗೆ ಹರಿಣಗಳ ತಂಡವು ಡಬಲ್ ಆಘಾತ ಎದುರಿಸುವಂತಾಗಿದೆ. ಅಲ್ಲದೆ ತನ್ನ ಅಗ್ರಸ್ಥಾನವನ್ನು ಭಾರತಕ್ಕೆ ಬಿಟ್ಟುಕೊಟ್ಟಿದೆ.

ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಸಮಾನ 120 ರೇಟಿಂಗ್ ಅಂಕಗಳನ್ನು ಹೊಂದಿದ್ದರೂ ದಶಾಂಶ ಪದ್ಧತಿಯ ಪ್ರಕಾರ ಮುನ್ನಡೆ ಕಾಯ್ದುಕೊಂಡಿದೆ.