ಕರ್ನಾಟಕದವರಾದ ಗುವಾಹಟಿ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಸೇರಿದಂತೆ ನಾಲ್ವರು ನ್ಯಾಯಮೂರ್ತಿಗಳನ್ನು ಸುಪ್ರೀಂ ಕೋರ್ಟ್ಗೆ ನೇಮಕ ಮಾಡಲಾಗಿದೆ.
ನವದೆಹಲಿ (ಪಿಟಿಐ): ಕರ್ನಾಟಕದವರಾದ ಗುವಾಹಟಿ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಸೇರಿದಂತೆ ನಾಲ್ವರು ನ್ಯಾಯಮೂರ್ತಿಗಳನ್ನು ಸುಪ್ರೀಂ ಕೋರ್ಟ್ಗೆ ನೇಮಕ ಮಾಡಲಾಗಿದೆ.
ಪ್ರಸ್ತುತ ಸುಪ್ರೀಂ ಕೋರ್ಟ್ನಲ್ಲಿ 27 ನ್ಯಾಯಮೂರ್ತಿಗಳಿದ್ದು, ಈ ನೇಮಕಾತಿಯಿಂದಾಗಿ ಮುಖ್ಯ ನ್ಯಾಯಮೂರ್ತಿ ಒಳಗೊಂಡಂತೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.
ನ್ಯಾಯಮೂರ್ತಿ ಬೋಪಣ್ಣ ಮತ್ತು ಬೋಸ್ ಅವರಿಗೆ ಬಡ್ತಿ ನೀಡುವ ಸಂಬಂಧ ಕೇಂದ್ರ ಸರ್ಕಾರ ಮೊದಲಿಗೆ ಆಕ್ಷೇಪ ವ್ಯಕ್ತಪಡಿಸಿತ್ತು. ಆದರೆ, ಈ ಆಕ್ಷೇಪವನ್ನು ತಿರಸ್ಕರಿಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಕೊಲಿಜಿಯಂ, ಈ ಇಬ್ಬರೂ ನ್ಯಾಯಮೂರ್ತಿಗಳ ಹೆಸರನ್ನು ಎರಡನೇ ಬಾರಿಗೆ ಶಿಫಾರಸು ಮಾಡಿತ್ತು.
# ಭಾರತದ ಸುಪ್ರೀಂಕೋರ್ಟ್ ಸ್ಥಾಪನೆ : ಜನೇವರಿ 28, 1950
# ಪ್ರಸ್ತುತ ಭಾರತದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ : ರಂಜನ್ ಗೋಗಯ್