ಕರ್ನಾಟಕದಲ್ಲಿ ನೀಡುವ ವಿವಿಧ ಪ್ರಶಸ್ತಿಗಳು

0
89

ಈ ಕೆಳಗೆ ಕರ್ನಾಟಕಲ್ಲಿ ನೀಡುವಂತಹ ವಿವಿಧ ಪ್ರಶಸ್ತಿಗಳ ಬಗ್ಗೆ ಸಂಕ್ಷಿಪ್ತವಾಗಿ ವಿವರಣೆ ನೀಡಲಾಗಿದೆ.

ಮೂವರಿಗೆ ‘ವೇಮಗಲ್‌ ಸಂಸ್ಕೃತಿ ಸಿರಿ’ ಪ್ರಶಸ್ತಿ

ಬೆಂಗಳೂರು: ಡಾ.ವೇಮಗಲ್‌ ನಾರಾಯಣಸ್ವಾಮಿ ಪ್ರತಿಷ್ಠಾನ ನೀಡುವ 2019ನೇ ಸಾಲಿನ ‘ಸಂಸ್ಕೃತಿ ಸಿರಿ’ ಪ್ರಶಸ್ತಿಗೆ ಹಿರಿಯ ಸಾಹಿತಿ ಎಚ್‌.ಎಸ್‌.ವೆಂಕಟೇಶಮೂರ್ತಿ, ಶ್ರೀಕೃಷ್ಣ ಪಾರಿಜಾತ ಕಲಾವಿದೆ ಮಲ್ಲವ್ವ ಮ್ಯಾಗೇರಿ ಹಾಗೂ ಸುಗಮ ಸಂಗೀತ ನಿರ್ದೇಶಕ ಬಿ.ವಿ.ಶ್ರೀನಿವಾಸ್‌ ಆಯ್ಕೆಯಾಗಿದ್ದಾರೆ.

ಪ್ರಶಸ್ತಿ ತಲಾ 25 ಸಾವಿರ ನಗದು ಒಳಗೊಂಡಿದೆ. ಇದೇ ಆಗಸ್ಟ್ 18ರಂದು ಸಂಜೆ 6ಕ್ಕೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ.ಹಿ.ಚಿ.ಬೋರಲಿಂಗಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

ಕಸ್ತೂರಿ ರಂಗನ್‌ಗೆ ಭಾಸ್ಕರ್‌ ಪ್ರಶಸ್ತಿ

ವಿಜಯಪುರ: ಸಿಂದಗಿಯ ಚನ್ನವೀರ ಸ್ವಾಮೀಜಿ ಪ್ರತಿಷ್ಠಾನ ನೀಡುವ ರಾಜ್ಯ ಮಟ್ಟದ ‘ಭಾಸ್ಕರ್‌ ಪ್ರಶಸ್ತಿ’ಗೆ ಹಿರಿಯ ವಿಜ್ಞಾನಿ ಕಸ್ತೂರಿ ರಂಗನ್‌ ಅವರನ್ನು ಆಯ್ಕೆ ಮಾಡಲಾಗಿದೆ.
 
‘ಸಿಂದಗಿ ಪಟ್ಟಣದಲ್ಲಿ ಇದೇ  ಆಗಸ್ಟ್ 25ರಂದು ಖಗೋಳ ಶಾಸ್ತ್ರಜ್ಞ ಭಾಸ್ಕರಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿ  1 ಲಕ್ಷ ನಗದು, ಬೆಳ್ಳಿಯ ಫಲಕ ಒಳಗೊಂಡಿದೆ’ ಎಂದು ವಿಧಾನ ಪರಿಷತ್‌ ಸದಸ್ಯ ಅರುಣ್‌ ಶಹಾಪುರ ಆಗಸ್ಟ್ 8 ರ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
 
ಸಿಂದಗಿ ಸಾರಂಗಮಠ, ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ ಆಶಯದಂತೆ ನಾಲ್ಕು ವರ್ಷಗಳಿಂದ ಹೆಸರಾಂತ ವಿಜ್ಞಾನಿಗಳಿಗೆ ಈ ಪ್ರಶಸ್ತಿ ನೀಡುತ್ತಿದೆ ಎಂದರು.