ಕರ್ನಾಟಕ : ಆರ್ಥಿಕ ಗಣತಿ ಕಾರ್ಯಕ್ಕೆ ಚಾಲನೆ

0
8

ವಿವಿಧ ಆರ್ಥಿಕ ಚಟುವಟಿಕೆಗಳ ಗಣತಿ ಕಾರ್ಯಕ್ಕೆ ನವೆಂಬರ್ 6 ರ ಬುಧವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು. ಇದೇ ಮೊದಲ ಬಾರಿಗೆ ಮೊಬೈಲ್ ಆ್ಯಪ್‌ನಲ್ಲಿ ಮಾಹಿತಿ ದಾಖಲಿಸಲಾಗುತ್ತಿದೆ.

ಬೆಂಗಳೂರು: ವಿವಿಧ ಆರ್ಥಿಕ ಚಟುವಟಿಕೆಗಳ ಗಣತಿ ಕಾರ್ಯಕ್ಕೆ  ನವೆಂಬರ್ 6 ರ ಬುಧವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು. ಇದೇ ಮೊದಲ ಬಾರಿಗೆ ಮೊಬೈಲ್ ಆ್ಯಪ್‌ನಲ್ಲಿ ಮಾಹಿತಿ ದಾಖಲಿಸಲಾಗುತ್ತಿದೆ.

ಯಡಿಯೂರಪ್ಪ ಅವರಿಂದ ಗಣತಿದಾರರು ಮಾಹಿತಿ ಸಂಗ್ರಹಿಸುವ ಮೂಲಕ ರಾಜ್ಯದಲ್ಲಿ ಗಣತಿ ಕಾರ್ಯ ಚಾಲನೆ ಪಡೆದುಕೊಂಡಿತು. ಮುಖ್ಯಮಂತ್ರಿ ಡಾಲರ್ಸ್ ಕಾಲೊನಿಯ ಮನೆಯ ವಿಳಾಸ ನೀಡಿದರು. ತಮ್ಮ ಮನೆಯಲ್ಲಿ ಯಾವುದೇ ಆರ್ಥಿಕ ಚಟುವಟಿಕೆ ನಡೆಯುತ್ತಿಲ್ಲ ಎಂಬ ವಿವರ ಕೊಟ್ಟರು.

ಸಂಘಟಿತ ಹಾಗೂ ಅಸಂಘಟಿತ ವಲಯದಲ್ಲಿ ವಿವಿಧ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಉದ್ಯಮಿಗಳ ಪಟ್ಟಿಮಾಡುವುದು, ಉದ್ಯಮದ ಕ್ಷೇತ್ರದಲ್ಲಿರುವ ಕಾರ್ಮಿಕರ ವಿವರ ಸಂಗ್ರಹಿಸುವುದು ಗಣತಿಯ ಮೂಲ ಉದ್ದೇಶವಾಗಿದೆ.

‘ಗಣತಿದಾರರು ಮನೆಗೆ ಬಂದ ಸಮಯದಲ್ಲಿ ಸರಿಯಾದ ಮಾಹಿತಿ ನೀಡಬೇಕು. ಸಂಗ್ರಹಿಸಿದ ಮಾಹಿತಿಯನ್ನು ಕ್ರೋಡೀಕರಿಸಲಾಗುತ್ತದೆ. ಇದರಿಂದ ಮುಂದಿನ ದಿನಗಳಲ್ಲಿ ಯೋಜನೆ ರೂಪಿಸಲು ಸರ್ಕಾರಕ್ಕೆ ಸಹಕಾರಿಯಾಗುತ್ತದೆ’ ಎಂದು ಯಡಿಯೂರಪ್ಪ ತಿಳಿಸಿದರು.