ಕರ್ನಾಟಕ ರಾಜ್ಯದ ಸರ್ಕಾರಿ ಕಚೇರಿಗಳ ಅವಧಿ ಬದಲು

0
806

ಬಿಸಿಲಿನ ತಾಪಮಾನ ಹೆಚ್ಚಾಗಿರುವ ಕಾರಣ ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಹಾಗೂ ಕಲಬುರ್ಗಿ ವಿಭಾಗಗಳ ಜಿಲ್ಲೆಗಳಲ್ಲಿ ಎಲ್ಲ ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣಾ ಅವಧಿಯನ್ನು ಬೆಳಿಗ್ಗೆ 8ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ನಿಗದಿಪಡಿಸಿ ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.

ಬೆಂಗಳೂರು: ಬಿಸಿಲಿನ ತಾಪಮಾನ ಹೆಚ್ಚಾಗಿರುವ ಕಾರಣ ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಹಾಗೂ ಕಲಬುರ್ಗಿ ವಿಭಾಗಗಳ ಜಿಲ್ಲೆಗಳಲ್ಲಿ ಎಲ್ಲ ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣಾ ಅವಧಿಯನ್ನು ಬೆಳಿಗ್ಗೆ 8 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ನಿಗದಿಪಡಿಸಿ ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.

ಈ ಕಚೇರಿ ಅವಧಿ ಬದಲಾವಣೆ ಏಪ್ರಿಲ್‌ 1ರಿಂದ ಮೇ 31ರ ವರೆಗೆ ಚಾಲ್ತಿಯಲ್ಲಿರುತ್ತದೆ. ಈ ಸಂಬಂಧ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಸಲ್ಲಿಸಿತ್ತು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಪರಿಶೀಲನಾ ಸಮಿತಿ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಯಿತು.

ಸಾರ್ವಜನಿಕರಿಗೆ ಯಾವುದೇ ಅನಾನುಕೂಲತೆಯಾಗದಂತೆ ಹಾಗೂ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ತುರ್ತು ಸಂದರ್ಭದಲ್ಲಿ ಯಾವುದೇ ಕಾರ್ಯನಿರ್ವಹಿಸಲು ಸೂಚನೆ ನೀಡಿದರೆ ಸಮಯದ ಪರಿಮಿತಿ ಇಲ್ಲದೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಲಾಗಿದೆ.