ಕರ್ನಾಟಕ ರಾಜ್ಯ ಸರಕಾರಿ ನೌಕರರಿಗೆ “ತುಟ್ಟಿ ಭತ್ಯೆ” ಹೆಚ್ಚಳ

0
1277

2018ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಶೇ.2.75ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. ಇದರಿಂದ ಶೇ.3.75ರಿಂದ ಶೇ.6.5ಕ್ಕೆಏರಿಕೆಯಾಗಿದೆ.

ಬೆಂಗಳೂರು: ಲೋಕಸಭಾ ಚುನಾವಣೆಯ ಹೊಸ್ತಿಲಲ್ಲೇ ರಾಜ್ಯ ಸರಕಾರ ಸರಕಾರಿ ನೌಕರರಿಗೆ ಬಂಪರ್‌ ಸುದ್ದಿ ಕೊಟ್ಟಿದೆ. ಜತೆಗೆ ಇದು ಯುಗಾದಿಯ ಬೋನಸ್‌ ಕೂಡ ಹೌದು 
ರಾಜ್ಯ ಸರಕಾರಿ ನೌಕರರಿಗೆ ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. 2018ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಶೇ.2.75ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. 

ಇದರಿಂದ ಶೇ.3.75ರಿಂದ ಶೇ.6.5ಕ್ಕೆಏರಿಕೆಯಾಗಿದೆ. 

ಪ್ರಸಕ್ತ ವರ್ಷದ ಜನವರಿ 1ರಿಂದಲೇ ಪೂರ್ವಾನ್ವಯವಾಗುವಂತೆ ತುಟ್ಟಿ ಭತ್ಯೆ ಹೆಚ್ಚಳವಾಗಲಿದೆ. 

8.5 ಲಕ್ಷ ಸರಕಾರಿ ನೌಕರರಿಗೆ ಮಾಸಿಕ ವೇತನ ಹೆಚ್ಚಳವಾಗಲಿದೆ. 

ಕೇಂದ್ರ ಸರಕಾರ ತುಟ್ಟಿ ಭತ್ಯೆ ಹೆಚ್ಚಳ ಮಾಡಿದ ಬೆನ್ನಲ್ಲೇ ರಾಜ್ಯ ಸರಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿದೆ. 

ಸರಕಾರದ ಮತ್ತು ಜಿಪಂಗಳ ಪೂರ್ಣಾವಧಿ ನೌಕರರರಿಗೆ, ಸರಕಾರದಿಂದ ಸಹಾಯಧನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ, ವಿವಿಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರಿಗೆ ಆ ಆದೇಶ ಅನ್ವಯವಾಗುತ್ತದೆ.