ಕರ್ನಾಟಕ ರಾಜ್ಯ ಸರ್ಕಾರದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಿದ ಮುಖ್ಯಮಂತ್ರಿ

0
147

ಪಕ್ಷೇತರ ಶಾಸಕರಾದ ರಾಣೆಬೆನ್ನೂರಿನ ಶಾಸಕ ಆರ್.ಶಂಕರ್ ಹಾಗೂ ಮುಳಬಾಗಿಲಿನ ನಾಗೇಶ್ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 10 ದಿನಗಳ ಬಳಿಕ ಕೊನೆಗೂ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ.

ಬೆಂಗಳೂರು: ಪಕ್ಷೇತರ ಶಾಸಕರಾದ ರಾಣೆಬೆನ್ನೂರಿನ ಶಾಸಕ ಆರ್.ಶಂಕರ್ ಹಾಗೂ ಮುಳಬಾಗಿಲಿನ ನಾಗೇಶ್ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 10 ದಿನಗಳ ಬಳಿಕ ಕೊನೆಗೂ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ.

ಜೂ. 14ರ ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ರಾಜಭವನದಲ್ಲಿ ರಾಜ್ಯಪಾಲ ವಿ.ಆರ್.ವಾಲಾ ಅವರು ಸಚಿವರಿಗೆ ಪ್ರಮಾಣ ವಚನ ಬೋಧಿಸಿದ್ದರು. ಅದಾದ ಬಳಿಕ ನೂತನ ಸಚಿವರಿಗೆ ಯಾವ ಖಾತೆ ಹಂಚಿಕೆಯಾಗಲಿದೆ ಎನ್ನುವ ಕುರಿತು ಎದ್ದಿದ್ದ ಕುತೂಹಲಗಳಿಗೀಗ ತೆರೆ ಬಿದ್ದಿದ್ದು, ಕೊನೆಗೂ ನೂತನ ಸಚಿವರಿಗೆ ಖಾತೆ ಹಂಚಿಕೆಯಾಗಿದೆ.

ಸಚಿವ ಆರ್.ಶಂಕರ್​ಗೆ ಪೌರಾಡಳಿತ ಖಾತೆ ಮತ್ತು ಎಚ್.ನಾಗೇಶ್​ಗೆ ಸಣ್ಣ ಕೈಗಾರಿಕೆ ಖಾತೆಯನ್ನು ಹಂಚಿಕೆ ಮಾಡಲಾಗಿದೆ. ಈ ಮೊದಲು ಸಣ್ಣ ಕೈಗಾರಿಕೆ ಖಾತೆಯನ್ನು ನಿಭಾಯಿಸುತ್ತಿದ್ದ ಗುಬ್ಬಿ ಶಾಸಕ ಎಂ ಆರ್‌ ಶ್ರೀನಿವಾಸ್‌ ಅವರಿಗೆ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರ ಬಳಿಯಿದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಯನ್ನು ನೀಡಲಾಗಿದೆ.

ರಾಜ್ಯದ ಏಕೈಕ ಬಿಎಸ್‌ಪಿ ಶಾಸಕರಾಗಿದ್ದ ಕೊಳ್ಳೆಗಾಲ ಕ್ಷೇತ್ರದ ಎನ್‌ ಮಹೇಶ್‌ ಈ ಮೊದಲು ಪ್ರಾಥಮಿಕ​ & ಪ್ರೌಢಶಿಕ್ಷಣ ಖಾತೆಯನ್ನು ನಿಭಾಯಿಸುತ್ತಿದ್ದರು. ಆದರೆ ಕೆಲ ದಿನಗಳ ಹಿಂದೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಖಾತೆಯನ್ನು ಮುಖ್ಯಮಂತ್ರಿಯೇ ಇಟ್ಟುಕೊಂಡಿದ್ದರು. ಇದೀಗ ಶ್ರೀನಿವಾಸ್‌ ಹೆಗಲಿದೆ ಖಾತೆಯನ್ನು ವರ್ಗಾಯಿಸಲಾಗಿದೆ.

ನೂತನ ಸಚಿವರ ಖಾತೆ ಹಂಚಿಕೆ ಪಟ್ಟಿ ರಾಜ್ಯಪಾಲರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ರವಾನಿಸಿದ್ದಾರೆ.