ಕರ್ನಾಟಕ ವಿಧಾನಸಭಾ ಚುನಾವಣೆ: ಮೇ 12ರಂದು ಮತದಾನ, ಮೇ 15ಕ್ಕೆ ಫಲಿತಾಂಶ

0
16

ಕರ್ನಾಟಕ ವಿಧಾನಸಭಾ ಚುನಾವಣೆ 2018 ಮೇ.12ರಂದು ನಡೆಯಲಿದೆ. ಇಂದು ಬೆಳಗ್ಗೆ ಚುನಾವಣಾ ಆಯೋಗ ನಡೆಸಿದ ಸುದ್ದಿಗೋಷ್ಠಿಯಲ್ಲಿ ದಿನಾಂಕ ಪ್ರಕಟಿಸಲಾಗಿದೆ.

ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆ 2018 ಮೇ 12 ರಂದು ನಡೆಯಲಿದೆ. ಇಂದು ಬೆಳಗ್ಗೆ ಚುನಾವಣಾ ಆಯೋಗ ನಡೆಸಿದ ಸುದ್ದಿಗೋಷ್ಠಿಯಲ್ಲಿ ದಿನಾಂಕ ಪ್ರಕಟಿಸಲಾಗಿದೆ. ಮೇ ತಿಂಗಳ 15 ರಂದು ಮತ ಎಣಿಕೆ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ದಿನಾಂಕ ಪ್ರಕಟಿಸಿದ ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್,  ಕರ್ನಾಟಕದಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ ಎಂದಿದ್ದಾರೆ.

ರಾಜ್ಯದಲ್ಲಿ ಒಟ್ಟು 4.96 ಕೋಟಿ ಮತದಾರರಿದ್ದಾರೆ. ಒಂದೇ ಒಂದು ಹಂತದ ಮತದಾನ ಇಲ್ಲಿ ನಡೆಯಲಿದ್ದು, 56,000 ಮತಗಟ್ಟೆಗಳಿರಲಿವೆ. ಈ ಬಾರಿ ಇವಿಎಂ ಜತೆ ವಿವಿ ಪ್ಯಾಟ್ (ಮತ ಖಾತರಿ ಯಂತ್ರ) ಇರಲಿದೆ. ಮತಗಟ್ಟೆಗಳಲ್ಲಿ ಅಂಗವಿಕಲರಿಗೆ ವಿಶೇಷ ಸೌಲಭ್ಯವಿರಲಿದೆ.

ಪಕ್ಷಗಳ ಚುನಾವಣಾ ವೆಚ್ಚಕ್ಕೆ ಯಾವುದೇ ಮಿತಿಯಿರುವುದಿಲ್ಲ, ಆದರೆ ಅಭ್ಯರ್ಥಿಯೊಬ್ಬರ ಚುನಾವಣಾ ವೆಚ್ಚ  28 ಲಕ್ಷಕ್ಕೆ ಸೀಮಿತಗೊಳಿಸಲಾಗಿದೆ.