ಕಲಬುರ್ಗಿ ವಿಮಾನ ನಿಲ್ದಾಣ ಲೋಕಾರ್ಪಣೆ ಮಾಡಿದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ

0
20

ಕಲ್ಯಾಣ ಕರ್ನಾಟಕ ಭಾಗದ ಜನತೆ, ಜನಪ್ರತಿನಿಧಿಗಳು ಹಾಗೂ ಉದ್ಯಮಿಗಳ ಬಹು ನಿರೀಕ್ಷಿತ ಕಲಬುರ್ಗಿ ವಿಮಾನ ನಿಲ್ದಾಣವನ್ನು
ನವೆಂಬರ್ 22ರಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಲೋಕಾರ್ಪಣೆ ಮಾಡಿದ್ದಾರೆ.

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಜನತೆ, ಜನಪ್ರತಿನಿಧಿಗಳು ಹಾಗೂ ಉದ್ಯಮಿಗಳ ಬಹು ನಿರೀಕ್ಷಿತ ಕಲಬುರ್ಗಿ ವಿಮಾನ ನಿಲ್ದಾಣವನ್ನು ನವೆಂಬರ್ 22ರಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಲೋಕಾರ್ಪಣೆ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಕಲಬುರ್ಗಿ ವಿಮಾನ ನಿಲ್ದಾಣ ಹೊಸ ಆಯಾಮ ನೀಡಲಿದೆ ರಾಜ್ಯದ ಈಶಾನ್ಯ ಭಾಗಕ್ಕೆ ವಿಮಾನ ಯಾನ ಸಂಪರ್ಕ ಹೊಂದಿರುವುದರಿಂದ ದೇಶ, ವಿದೇಶದಿಂದ ಉದ್ಯಮಿಗಳುಇಲ್ಲಿ ಹಣ ಹೂಡಿಕೆ ಮಾಡಲಿದ್ದಾರೆ ಎಂದು ಹೇಳಿದರು.

3.175 ಕಿ.ಮಿ. ಉದ್ದದ ರನ್ ವೇ ಯನ್ನು ಹೊಂದಿರುವ ಕಲಬುರಗಿ ವಿಮಾನ ನಿಲ್ದಾಣ ರಾಜ್ಯದ 2ನೇ ಹಾಗೂ ದೇಶದ 10ನೇ ಅತಿ ಉದ್ದದ ರನ್ ವೇ ಇದಾಗಿದೆ. ದೇಶಕ್ಕೆ ಶೇ.30 ರಷ್ಟು ತೊಗರಿ ಉತ್ಪಾದಿಸುವ ಮತ್ತು ಸಿಮೆಂಟ್ ರಫ್ತಿನಿಂದ ಕಲಬುರ್ಗಿ ಜಿಲ್ಲೆ ವಿಶ್ವದಾದ್ಯಂತ ಗಮನ ಸೆಳೆದಿದೆ. ಹೀಗಾಗಿ ಇಲ್ಲಿನ ವಿಮಾನ ನಿಲ್ದಾಣವನ್ನು ಭವಿಷ್ಯದಲ್ಲಿ ಸರಕು ಸಾಗಣೆಗೂ ಬಳಸಿಕೊಳ್ಳುವಂತೆ ನಾನು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ ಎಂದರು.

ಈ ವೇಳೆ ಬಿಜೆಪಿ ಮುಖಂಡರಾದ ಮುರಳಿಧರ್ ರಾವ್  ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಬೃಹತ್ ಮತ್ತು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಸೇರಿದಂತೆ ಅನೇಕ ಗಣ್ಯ ವ್ಯಕ್ತಿಗಳು ಭಾಗವಹಿಸಿದ್ದರು.