‘ಕಾಂಪಿಟ್‌ ವಿತ್‌ ಚೈನಾ’ ಯೋಜನೆಯಡಿ ಕರ್ನಾಟಕದ ‘9 ಜಿಲ್ಲೆಗಳಲ್ಲಿ ಕೈಗಾರಿಕಾ ಕ್ಲಸ್ಟರ್‌ಗಳು’

0
588

‘ಕಾಂಪಿಟ್‌ ವಿತ್‌ ಚೈನಾ’ ಯೋಜನೆಯಡಿ ರಾಜ್ಯದ 9 ಜಿಲ್ಲೆಗಳಲ್ಲಿ ವಿವಿಧ ಕೈಗಾರಿಕಾ ಕ್ಲಸ್ಟರ್‌ಗಳನ್ನು ರಾಜ್ಯ ಸರ್ಕಾರ ಸ್ಥಾಪಿಸಲಿದೆ’ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು.

ಬೆಂಗಳೂರು: ‘ಕಾಂಪಿಟ್‌ ವಿತ್‌ ಚೈನಾ’ ಯೋಜನೆಯಡಿ ರಾಜ್ಯದ 9 ಜಿಲ್ಲೆಗಳಲ್ಲಿ ವಿವಿಧ ಕೈಗಾರಿಕಾ ಕ್ಲಸ್ಟರ್‌ಗಳನ್ನು ರಾಜ್ಯ ಸರ್ಕಾರ ಸ್ಥಾಪಿಸಲಿದೆ’ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು.

ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ‘ಕಾಂಪಿಟ್‌ ವಿತ್‌ ಚೈನಾ’ ಯೋಜನೆಯಡಿ ಸ್ಥಾಪಿಸಲಾಗಿರುವ ವಿವಿಧ ಉದ್ಯಮಗಳ ಮುಖ್ಯಸ್ಥರನ್ನು ಒಳಗೊಂಡ ವಿಶನ್‌ ಗ್ರೂಪ್‌ ಜತೆ ಕುಮಾರಸ್ವಾಮಿ ಸಂವಾದ ನಡೆಸಿದರು.

ಈ ಯೋಜನೆಗೆ ಈಗ 500 ಕೋಟಿ ಅನುದಾನ ನೀಡಲಾಗಿದೆ. ಮುಂದಿನ ವರ್ಷ 2000 ಕೋಟಿ ಅನುದಾನ ಒದಗಿಸಲಾಗುವುದು. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಸೃಷ್ಟಿಸುವ ಉದ್ದೇಶದಿಂದ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ ಎಂದರು.

ಈ ಯೋಜನೆಯಡಿ ಕಲಬುರ್ಗಿಯಲ್ಲಿ ಸೋಲಾರ್ ವಿದ್ಯುತ್ ಉಪಕರಣಗಳ ತಯಾರಿಕೆ, ಹಾಸನದಲ್ಲಿ ಟೈಲ್ಸ್ ಮತ್ತು ಸ್ಯಾನಿಟರಿ ಉತ್ಪನ್ನಗಳು, ಕೊಪ್ಪಳದಲ್ಲಿ ಎಲೆಕ್ಟ್ರಾನಿಕ್ಸ್‌ ಆಟಿಕೆಗಳ ತಯಾರಿಕೆ, ಮೈಸೂರಿನಲ್ಲಿ ಪಿಸಿಬಿ ತಯಾರಿಕೆ, ಬಳ್ಳಾರಿಯಲ್ಲಿ ವಸ್ತ್ರೋದ್ಯಮ, ಚಿಕ್ಕಬಳ್ಳಾಪುರದಲ್ಲಿ ಮೊಬೈಲ್ ಬಿಡಿ ಭಾಗಗಳ ತಯಾರಿಕೆ, ತುಮಕೂರಿನಲ್ಲಿ ಕ್ರೀಡೆ ಮತ್ತು ಫಿಟ್‍ನೆಸ್ ಉಪಕರಣಗಳ ತಯಾರಿಕಾ ಕ್ಲಸ್ಟರ್‌ಗಳನ್ನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದೆ ಎಂದರು.