ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ 3.33 ಕೋಟಿ ಮಂದಿ ಪ್ರಯಾಣ

0
409

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ (ಕೆಐಎ) 2018–19ರಲ್ಲಿ 3.33 ಕೋಟಿ ಮಂದಿ ಪ್ರಯಾಣಿಸಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ, ಪ್ರಯಾಣಿಕರ ಸಂಖ್ಯೆಯಲ್ಲಿ ಶೇ 23.8ರಷ್ಟು ಹೆಚ್ಚಳವಾಗಿದೆ.

ಜಗತ್ತಿನಲ್ಲೇ ಅತಿ ವೇಗವಾಗಿ ಬೆಳೆಯುತ್ತಿರುವ ವಿಮಾನ ನಿಲ್ದಾಣ ಎನ್ನುವ ಕೀರ್ತಿಗೆ ಅದು

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ (ಕೆಐಎ) 2018–19ರಲ್ಲಿ 3.33 ಕೋಟಿ ಮಂದಿ ಪ್ರಯಾಣಿಸಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ, ಪ್ರಯಾಣಿಕರ ಸಂಖ್ಯೆಯಲ್ಲಿ ಶೇ 23.8ರಷ್ಟು ಹೆಚ್ಚಳವಾಗಿದೆ.

ಜಗತ್ತಿನಲ್ಲೇ ಅತಿ ವೇಗವಾಗಿ ಬೆಳೆಯುತ್ತಿರುವ ವಿಮಾನ ನಿಲ್ದಾಣ ಎನ್ನುವ ಕೀರ್ತಿಗೆ ಅದು ಪಾತ್ರವಾಗಿದೆ.  

ನಿಲ್ದಾಣದ ವಾರ್ಷಿಕ ಸಾರಿಗೆ ವರದಿಯನ್ನು ಸೋಮವಾರ ಬಿಡುಗಡೆ ಮಾಡಲಾಯಿತು. ದೇಶಿ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ 24.8ರಷ್ಟು ಹೆಚ್ಚಳವಾಗಿದ್ದರೆ, ವಿದೇಶಿ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ 17.5ರಷ್ಟು ಏರಿಕೆಯಾಗಿದೆ.

2019ರ ಜ.20ರಂದು ಒಂದೇ ದಿನದಲ್ಲಿ 109,174 ಮಂದಿ ಪ್ರಯಾಣಿಸಿದ್ದು, ಇದು ವರ್ಷದ ಗರಿಷ್ಠ ಸಂಖ್ಯೆಯಾಗಿದೆ.ಜ.11ರಂದು ಹೆಚ್ಚು ಅಂದರೆ, 750 ವಿಮಾನಗಳು ಹಾರಾಟ ನಡೆಸಿವೆ. ಕಾರ್ಗೊ ಸೇವೆಯಲ್ಲೂ ಗಣನೀಯ ಏರಿಕೆ ಕಂಡುಬಂದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 11ರಷ್ಟು ಹೆಚ್ಚಳವಾಗಿದೆ ಎಂದು ಹೇಳಲಾಗಿದೆ.. ಒಟ್ಟು 3,86,780 ಮೆಟ್ರಿಕ್‌ ಟನ್‌ ಸರಕು ಸಾಗಣೆ ಮಾಡಲಾಗಿದೆ. 2017–18ರಲ್ಲಿ ಒಂದು ವರ್ಷದಲ್ಲಿ  3,48,403 ಮೆಟ್ರಿಕ್‌ ಟನ್‌ ಸರಕು ಸಾಗಿಸಲಾಗಿತ್ತು.

ಪ್ರಯಾಣಿಕರ ಸಂಖ್ಯೆಯಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ(ಬಿಐಎಎಲ್) ಸಂಸ್ಥೆಯು ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲು ಮುಂದಾಗಿದೆ.