ಕೇಂದ್ರ ನೌಕರರ ತುಟ್ಟಿಭತ್ಯೆ ಶೇ 5ರಷ್ಟು ಹೆಚ್ಚಳ

0
4

ದೀಪಾವಳಿಗೂ ಮುನ್ನ ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಖುಷಿ ಸುದ್ದಿ ನೀಡಿದೆ. ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರ ತುಟ್ಟಿಭತ್ಯೆಯನ್ನು ಶೇ 5ರಷ್ಟು ಹೆಚ್ಚಿಸಲಾಗಿದೆ.

ನವದೆಹಲಿ (ಪಿಟಿಐ): ದೀಪಾವಳಿಗೂ ಮುನ್ನ ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಖುಷಿ ಸುದ್ದಿ ನೀಡಿದೆ. ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರ ತುಟ್ಟಿಭತ್ಯೆಯನ್ನು ಶೇ 5ರಷ್ಟು ಹೆಚ್ಚಿಸಲಾಗಿದೆ. 

ಅಕ್ಟೋಬರ್ 9 ರ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಈ ನಿರ್ಧಾರ ತೆಗೆದುಕೊಂಡಿದ್ದು, 50 ಲಕ್ಷ ನೌಕರರು ಹಾಗೂ 65 ಲಕ್ಷ ಪಿಂಚಣಿದಾರರಿಗೆ ಇದರಿಂದ ನೆರವಾಗಲಿದೆ. ಶೇ 12ರಿಂದ ಶೇ 17ಕ್ಕೆ ತುಟ್ಟಿಭತ್ಯೆ ಏರಿಸಲಾಗಿದ್ದು, ಜುಲೈ 1ರಿಂದ ಇದು ಅನ್ವಯವಾಗಲಿದೆ. ಇದರಿಂದ ಕೇಂದ್ರದ ಬೊಕ್ಕಸಕ್ಕೆ 16 ಸಾವಿರ ಕೋಟಿ ಹೊರೆ ಬೀಳಲಿದೆ. 

ಆಧಾರ್ ಜೋಡಣೆ ಗಡುವು ವಿಸ್ತರಣೆ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ನಿಧಿ ಯೋಜನೆಗೆ ಆಧಾರ್ ಸಂಖ್ಯೆ ಜೋಡಣೆ ಮಾಡುವ ಅವಧಿಯನ್ನು ಕೇಂದ್ರ ಸರ್ಕಾರ ನವೆಂಬರ್.30ರವರೆಗೆ ವಿಸ್ತರಿಸಿದೆ. ಈ ಯೋಜನೆಯಡಿ ರೈತರಿಗೆ ವಾರ್ಷಿಕ 6,000 ನೀಡಲಾಗುತ್ತದೆ. 

ಮೂರು ಕಂತುಗಳಲ್ಲಿ ರೈತರ ಖಾತೆಗೆ ನೇರವಾಗಿ ಹಣ ಸಂದಾಯವಾಗಲಿದೆ. ಆಗಸ್ಟ್.1ರ ಬಳಿಕ ಆಧಾರ್‌ ಸಂಖ್ಯೆ ಜೋಡಣೆಯನ್ನು ಕಡ್ಡಾಯಗೊಳಿಸಲಾಗಿದೆ. ಆಧಾರ್ ಜೋಡಣೆಗೆ ಇನ್ನಷ್ಟು ಸಮಯ ನೀಡುವುದರಿಂದ ಹೆಚ್ಚು ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳಲಿದ್ದಾರೆ ಎಂದು ಸರ್ಕಾರ ತಿಳಿಸಿದೆ. ಈಗಾಗಲೇ 7 ಕೋಟಿ ರೈತರು ಫಲಾನುಭವಿಗಳಾಗಿದ್ದಾರೆ.