ಗಾಂಧೀಜಿ ಸ್ಮರಣೆಗೆ ರೂ.150 ಮುಖಬೆಲೆಯ ಹೊಸ ನಾಣ್ಯ ಬಿಡುಗಡೆ

0
19

ರಾಷ್ಟ್ರಪಿತ ಮಹಾತ್ಮ ಗಾಂಧೀಯವರ 150ನೇ ಜನ್ಮಶತಮಾನೋತ್ಸವದ ಸ್ಮರಣೆಗಾಗಿ ಭಾರತ ಸರ್ಕಾರ ರೂ.150 ಹೊಸ ನಾಣ್ಯವನ್ನು ಬಿಡುಗಡೆ ಮಾಡಿದೆ.

ಅಹಮದಾಬಾದ್ ನಲ್ಲಿರುವ ಸಾಬರ್ ಮತಿ ಆಶ್ರಮದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಈ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿಯವರು, ಕೇವಲ ಶೌಚಾಲಯಗಳ ನಿರ್ಮಾಣವಾದರೆ ಸಾಲದು, ಅದರ ನಿಯಮಿತ ಬಳಕೆ ಅಗತ್ಯ ಎಂದು ಪ್ರತಿಪಾದಿಸುವ ಮೂಲಕ ಭಾರತವನ್ನು ಬಯಲು ಶೌಚ ಮುಕ್ತ ಎಂದು ಘೋಷಿಸಿದರು.

ಇಂದು ಗ್ರಾಮೀಣ ಭಾರತ ಹಾಗೂ ಅದರ ಗ್ರಾಮಗಳು ತಮ್ಮ ಪ್ರದೇಶಗಳನ್ನು ಬಯಲು ಶೌಚ ಮುಕ್ತ ಎಂದು ಘೋಷಿಸಿಕೊಂಡಿವೆ. 2014 ರಲ್ಲಿ ಈ ಗುರಿಯನ್ನು ನಿಗದಿಪಡಿಸಲಾಗಿತ್ತು. ಇದಕ್ಕೆ ಸ್ವಯಂ ಪ್ರೇರಿತವಾಗಿ ನಡೆಯುತ್ತಿರುವ ಸ್ವಚ್ಛ ಭಾರತ ಅಭಿಯಾನ ಶಕ್ತಿ ಹಾಗೂ ಯಶಸ್ಸಿನ ಮೂಲ ಎಂದು ಹೇಳಿದರು.