ಗಾಜಾ ಚಂಡಮಾರುತ: ಸಾವಿನ ಸಂಖ್ಯೆ 45ಕ್ಕೆ ಏರಿಕೆ

0
557

ತಮಿಳುನಾಡಿನಲ್ಲಿ ಅಪ್ಪಳಿಸಿದ ಗಾಜಾ ಚಂಡಮಾರುತದಿಂದ ಸಾವನ್ನಪ್ಪಿದವರ ಸಂಖ್ಯೆ 45ಕ್ಕೆ ಏರಿಕೆಯಾಗಿದೆ. ಪರಿಹಾರ ಕಾರ್ಯಾಚರಣೆಯಲ್ಲಿ ಎಲ್ಲ ಪಕ್ಷದ ಮುಖಂಡರು ಕೈಜೋಡಿಸಬೇಕು ಎಂದು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಅವರು ಮನವಿ ಮಾಡಿದ್ದಾರೆ.

ಸೇಲಂ (ಪಿಟಿಐ): ತಮಿಳುನಾಡಿನಲ್ಲಿ ಅಪ್ಪಳಿಸಿದ ಗಾಜಾ ಚಂಡಮಾರುತದಿಂದ ಸಾವನ್ನಪ್ಪಿದವರ ಸಂಖ್ಯೆ 45ಕ್ಕೆ ಏರಿಕೆಯಾಗಿದೆ. ಪರಿಹಾರ ಕಾರ್ಯಾಚರಣೆಯಲ್ಲಿ ಎಲ್ಲ ಪಕ್ಷದ ಮುಖಂಡರು ಕೈಜೋಡಿಸಬೇಕು ಎಂದು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಅವರು ಮನವಿ ಮಾಡಿದ್ದಾರೆ.

ಸಂತ್ರಸ್ತರಿಗೆ ಸಮರೋಪಾದಿಯಲ್ಲಿ ನೆರವು ನೀಡಲಾಗುತ್ತಿದ್ದು, ಚಂಡಮಾರುತ ಪೀಡಿತ ನಾಗಪಟ್ಟಣಂ, ತಂಜಾವೂರ್‌, ತಿರುವರೂರ್‌ ಹಾಗೂ ಪುದುಕೊಟ್ಟಾಯಿ ಜಿಲ್ಲೆಗಳಿಗೆ ಸಚಿವರನ್ನೇ ಪರಿಹಾರ ಕಾರ್ಯದ ಮೇಲುಸ್ತುವಾರಿಗಳನ್ನಾಗಿ ನೇಮಿಸಲಾಗಿದೆ.

‘ಚಂಡಮಾರುತದಿಂದ ತೀವ್ರವಾಗಿ ಹಾನಿಗೊಂಡಿರುವ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಸಾಕಷ್ಟು ಮರಗಳು ಧರೆಗುರುಳಿದ್ದು, ಬೆಳೆದುನಿಂತ ಪೈರಿಗೆ ಹಾನಿಯಾಗಿದೆ. 45 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ’ ಎಂದು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ತಿಳಿಸಿದರು.

10 ಲಕ್ಷ ಪರಿಹಾರ

ಮೃತರ ಕುಟುಂಬದ ಸದಸ್ಯರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 10 ಲಕ್ಷ ಪರಿಹಾರ ಘೋಷಿಸಿದ್ದು, ಗಂಭೀರವಾಗಿ ಗಾಯಗೊಂಡವರಿಗೆ 1 ಲಕ್ಷ, ಸಣ್ಣ ಪ್ರಮಾಣದ ಗಾಯಕ್ಕೆ ತುತ್ತಾದವರಿಗೆ 25 
ಸಾವಿರ ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಪಳನಿಸ್ವಾಮಿ ಘೋಷಿಸಿದರು.