ಗೋವಾ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ ನಿಧನ

0
950

ಹಲವು ವರ್ಷಗಳಿಂದ ತೀವ್ರ ಅನಾರೋಗ್ಯಪೀಡಿತರಾಗಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್‌ ಮಾರ್ಚ್ 17 ರ ಭಾನುವಾರ ರಾತ್ರಿ ನಿಧನರಾದರು

ಹೊಸದಿಲ್ಲಿ: ಹಲವು ವರ್ಷಗಳಿಂದ ತೀವ್ರ ಅನಾರೋಗ್ಯಪೀಡಿತರಾಗಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್‌ ಮಾರ್ಚ್ 17 ರ ಭಾನುವಾರ ರಾತ್ರಿ ನಿಧನರಾದರು.

ಹಲವಾರು ವರ್ಷಗಳಿಂದ ಕ್ಯಾನ್ಸರ್‌ ರೋಗಕ್ಕೆ ತುತ್ತಾಗಿದ್ದ ಮನೋಹರ್‌ ಪರಿಕ್ಕರ್‌ಗೆ ವೈದ್ಯರು ನಿರಂತರ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಮನೋಹರ್‌ ಪರಿಕ್ಕರ್‌ ಭಾನುವಾರ ರಾತ್ರಿ ಕೊನೆಯುಸಿರೆಳೆದರು ಎಂದು ಕುಟುಂಬ ಸದಸ್ಯರು ಮಾಹಿತಿ ನೀಡಿದ್ದಾರೆ. 

ಮನೋಹರ್ ಪರಿಕ್ಕರ್‌ ಅವರು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ರಕ್ಷಣಾ ಸಚಿವರಾಗಿ ಉತ್ತಮ ಕಾರ್ಯನಿರ್ವಹಿಸಿದ್ದರು.

ಮನೋಹರ್ ಪರಿಕ್ಕರ್‌ ಅವರು ಡಿಸೆಂಬರ್ 13, 1955 ರಂದು ಗೋವಾದಲ್ಲಿ ಜನಿಸಿದ್ದರು.

ಗೋವಾದ ಮಾಪುಸದಲ್ಲಿ. ಮಾರ್ಗೋವಾದ ಲಯೋಲಾ ಪ್ರೌಢಶಾಲೆಯಲ್ಲಿ ಮರಾಠಿಯಲ್ಲಿ ವಿದ್ಯಾಭ್ಯಾಸ ಮಾಡಿದ ಪರಿಕರ್, ಐಐಟಿ ಬಾಂಬೆಯಲ್ಲಿ ಮೆಟಲರ್ಜಿಕಲ್ ಎಂಜಿನಿಯರಿಂಗ್ ನಲ್ಲಿ 1978ರಲ್ಲಿ ಪದವಿ ಪಡೆದರು. ಐಐಟಿಯಲ್ಲಿ ವಿದ್ಯಾಭ್ಯಾಸ ಮಾಡಿ, ಭಾರತದ ರಾಜ್ಯವೊಂದಕ್ಕೆ ಶಾಸಕರಾಗಿ ಆಯ್ಕೆಯಾದ ಮೊದಲ ವ್ಯಕ್ತಿ ಮನೋಹರ್ ಪರಿಕರ್.

ಬಿಜೆಪಿಯ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದ ಮನೋಹರ್‌ ಪರಿಕ್ಕರ್‌ ಹಲವು ವರ್ಷಗಳಿಂದ ಅನಾರೋಗ್ಯಕ್ಕೊಳಗಾಗಿದ್ದರು. 

ಮೇದೋಜೀರಕ ಗ್ರಂಥಿಯ ಕ್ಯಾನ್ಸರ್‌ಗಾಗಿ ಕಳೆದ ವರ್ಷ ಅಮೆರಿಕದಲ್ಲಿ 3 ತಿಂಗಳ ಕಾಲ ಚಿಕಿತ್ಸೆ ಪಡೆದು ತಾಯ್ನಾಡಿಗೆ ವಾಪಸಾಗಿದ್ದರು. 

ಕಳೆದ ವರ್ಷ ಫೆಬ್ರವರಿಯಲ್ಲಿ ಪರಿಕ್ಕರ್‌‌ಗೆ ಕ್ಯಾನ್ಸರ್ ಕಾಯಿಲೆ ಇದೆ ಎಂಬುದು ಪತ್ತೆಯಾಗಿತ್ತು. ಬಳಿಕ ವಿದೇಶಕ್ಕೆ ಹೋಗಿ ಚಿಕಿತ್ಸೆ ಪಡೆದು ಬಂದಿದ್ದರು. ಗೋವಾ, ಮುಂಬಯಿ, ಅಮೆರಿಕಾ ಮತ್ತು ದಿಲ್ಲಿಯಲ್ಲಿ ಚಿಕಿತ್ಸೆ ಪಡೆದ ಬಳಿಕ ನಿವಾಸಕ್ಕೆ ಮರಳಿ ಅಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದರು.