ಗೌತಮ್ ಗಂಭೀರ್ ಗೆ 2019 ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಗೌರವ

0
879

ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಂದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಗೌತಮ್ ಗಂಭೀರ್ ಪದ್ಮ ಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

ಹೊಸದಿಲ್ಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಂದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಗೌತಮ್ ಗಂಭೀರ್ ಪದ್ಮ ಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. 

ಮಾರ್ಚ್ 16 ರ ಶನಿವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪದ್ಮ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಲಾಯಿತು. ಗಂಭೀರ್ ಜತೆಗೆ ಹಲವು ಕ್ರೀಡಾಪಟುಗಳಿಗೆ ಪದ್ಮ ಪ್ರಶಸ್ತಿಗಳಿಗೆ ಆಯ್ಕೆಯಾಗಿದ್ದಾರೆ. ಇದರಲ್ಲಿ ಭಾರತ ಫುಟ್ಬಾಲ್ ತಂಡದ ನಾಯಕ ಸುನಿಲ್ ಛೆಟ್ರಿ , ಭಾರತದ ಕಬಡ್ಡಿ ಆಟಗಾರ ಅಜಯ್ ಟಾಕೂರ್, ಭಾರತೀಯ ಬಿಲ್ಲುಗಾರ್ತಿ ಬೊಂಬಾಯಲಾ ದೇವಿ ಲೈಶ್ರಾಮ್, ಬಾಸ್ಕಟ್ ಬಾಲ್ ಆಟಗಾರ್ತಿ ಪ್ರಶಾಂತಿ ಸಿಂಗ್, ಟೇಬಲ್ ಟೆನಿಸ್ ಆಟಗಾರ ಶರತ್ ಕಮಲ್ ಆಚಂತಾ, ಕುಸ್ತಿ ಆಟಗಾರ ಬಜರಂಗ ಪೂನಿಯಾ, ಚೆಸ್ ಆಟಗಾರ್ತಿ ಹರಿಕಾ ದ್ರೋಣವಲ್ಲಿಮುಂತಾದದವರು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ