ಗ್ಯಾರಿ ಕರ್ಸ್ಟನ್ ಆರ್‌ಸಿಬಿ ತಂಡದ ನೂತನ ಕೋಚ್

0
418

ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಹಾಗೂ ಟೀಮ್ ಇಂಡಿಯಾ ಮಾಜಿ ಕೋಚ್ ಗ್ಯಾರಿ ಕರ್ಸ್ಟನ್ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮುಖ್ಯ ತರಬೇತುದಾರನಾಗಿ ನೇಮಕಗೊಂಡಿದ್ದಾರೆ.

ಬೆಂಗಳೂರು: ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಹಾಗೂ ಟೀಮ್ ಇಂಡಿಯಾ ಮಾಜಿ ಕೋಚ್ ಗ್ಯಾರಿ ಕರ್ಸ್ಟನ್ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮುಖ್ಯ ತರಬೇತುದಾರನಾಗಿ ನೇಮಕಗೊಂಡಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಆರ್‌ಸಿಬಿ  ಇದುವರೆಗೆ ಟ್ರೋಫಿ ಗೆದ್ದಿಲ್ಲ. ಇದೀಗ 2011 ಏಕದಿನ ವಿಶ್ವಕಪ್ ವಿಜೇತ ಭಾರತ ತಂಡದ ಕೋಚ್ ಆಗಿರುವ ಕರ್ಸ್ಟನ್ ಆಗಮನದೊಂದಿಗೆ ಆರ್‌ಸಿಬಿ ಮತ್ತದೇ ಪ್ರದರ್ಶನವನ್ನು ನಿರೀಕ್ಷೆ ಮಾಡುತ್ತಿದೆ. 

ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಆಗಿರುವ ಐಪಿಎಲ್‌ನ ಮುಂದಿನ ಆವೃತ್ತಿಯಲ್ಲಿ ಗ್ಯಾರಿ ಕರ್ಸ್ಟನ್ ಅವರು ಆರ್‌ಸಿಬಿ ತಂಡದ ಮುಖ್ಯ ಕೋಚ್ ಹಾಗೂ ಮೆಂಟರ್ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ. 

ಈ ಮೊದಲು ಆರ್‌ಸಿಬಿ ಫ್ರಾಂಚೈಸಿಯಲ್ಲಿ ಮೇಜರ್ ಸರ್ಜರಿ ಮಾಡಲಾಗಿತ್ತು. ಅಲ್ಲದೆ ನ್ಯೂಜಿಲೆಂಡ್‌ನ ಮಾಜಿ ನಾಯಕ ಡ್ಯಾನಿಯಲ್ ವೆಟರಿ ಅವರನ್ನು ಕೋಚ್ ಸ್ಥಾನದಿಂದ ವಜಾಗೊಳಿಸಲಾಗಿತ್ತು. 

ದಕ್ಷಿಣ ಆಫ್ರಿಕಾದ ಮಾಜಿ ಎಡಗೈ ಬ್ಯಾಟ್ಸ್‌ಮನ್ ಆಗಿರುವ ಕರ್ಸ್ಟನ್, 2018ನೇ ಆವೃತ್ತಿಯಲ್ಲಿ ಆರ್‌ಸಿಬಿ ಬ್ಯಾಟಿಂಗ್ ಕೋಚ್ ಆಗಿ ಸೇವೆ ಸಲ್ಲಿಸಿದ್ದರು.