ಚಂದ್ರಯಾನ-2 ಯಶಸ್ಸಿನ ರೂವಾರಿ, ಇಸ್ರೋ ಅಧ್ಯಕ್ಷ ಕೆ. ಶಿವನ್ ಗೆ ಅಬ್ದುಲ್ ಕಲಾಂ ಪ್ರಶಸ್ತಿ

0
49

ಇಸ್ರೋ ಅಧ್ಯಕ್ಷ ಕೆ.ಶಿವನ್ ಅವರಿಗೆ ತಮಿಳುನಾಡು ಸರ್ಕಾರದ ಡಾ ಎ ಪಿ ಜೆ ಅಬ್ದುಲ್ ಕಲಾಂ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಆಗಸ್ಟ್ 22 ರ ಗುರುವಾರ ತಮಿಳುನಾಡು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಶಿವನ್ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.

ಚೆನ್ನೈ: ಇಸ್ರೋ ಅಧ್ಯಕ್ಷ ಕೆ.ಶಿವನ್  ಅವರಿಗೆ ಮಿಳುನಾಡು ಸರ್ಕಾರದ ಡಾ ಎ ಪಿ ಜೆ ಅಬ್ದುಲ್ ಕಲಾಂ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಆಗಸ್ಟ್ 22 ರ ಗುರುವಾರ ತಮಿಳುನಾಡು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಶಿವನ್ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.

ಇತ್ತೀಚೆಗೆ ಚಂದ್ರಯಾನ–2 ಮಿಷನ್ ಅನ್ನು ಇಸ್ರೋ ಯಶಸ್ವಿಯಾಗಿ ಉಡಾವಣೆ ಮಾಡಿದ್ದು ಇದರ  ನೇತೃತ್ವ ವಹಿಸಿದ್ದ ಕೈಲಸಾವಾಡಿವು ಶಿವನ್ ಅವರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಿರುವುದು ವಿಜ್ಞಾನ ತಂತ್ರಜ್ಞಾನದ ಜಗತ್ತಿನಲ್ಲಿ ಸಂತಸ ತಂದಿದೆ.

ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷೇತ್ರದಲ್ಲಿ ಶಿವನ್ ಅವರ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ಘೋಷಿಸಲಾಗಿತ್ತು.ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷರಾದ ಶಿವನ್ ಅವರು ಆಗಸ್ಟ್ 15 ರಂದು ನಡೆದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಚೆನ್ನೈನಲ್ಲಿನ ಸಮಾರಂಬದಲ್ಲಿ ಪ್ರಶಸ್ತಿ ಸ್ವೀಕರಿಸಬೇಕಾಗಿತ್ತು. ಆದರೆ ಕಾರಣಾಂತರದಿಂದ ಅದು ಸಾಧ್ಯವಾಗದ ಕಾರಣ ಇಂದು ಪ್ರಶಸ್ತಿ ಸ್ವೀಕಾರ ಕಾರ್ಯಕ್ರಮ ನೆರವೇರಿದೆ.
 
ಪ್ರಶಸ್ತಿ 8 ಗ್ರಾಂ ಚಿನ್ನದ ಪದಕ, ರೂ. ಐದು ಲಕ್ಷ ನಗದು ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ.
 
 
ಪೋಹಣಕರ್‌ಗೆ ಬಸವರಾಜ ರಾಜಗುರು ರಾಷ್ಟ್ರೀಯ ಪ್ರಶಸ್ತಿ
 
ಧಾರವಾಡ: ಪಂಡಿತ್ ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ನೀಡುವ ರಾಷ್ಟ್ರೀಯ ಪ್ರಶಸ್ತಿಗೆ ಮುಂಬೈನ ಹಿಂದೂಸ್ತಾನಿ ಗಾಯಕ ಪಂಡಿತ್ ಅಜಯ್ ಪೋಹಣಕರ್‌ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 1ಲಕ್ಷ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.
 
ಪುಣೆಯ ಸಾವನಿ ಶೇಂಡೆ ಹಾಗೂ ಬಾಗಲ ಕೋಟೆಯ ಕೇಶವ ಜೋಶಿ ಅವರು ಯುವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಯುವ ಪ್ರಶಸ್ತಿಯು ತಲಾ 25 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ. ಆ. 24ರಂದು ಇಲ್ಲಿನ ಸೃಜನಾ ರಂಗಮಂದಿರದಲ್ಲಿ ನಡೆಯುವ ಸಮಾರಂಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.