ಜಗತ್ತಿನ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್​ ಈಗ ಪ್ರವಾಸಿಗರಿಗೆ ಮುಕ್ತ: ಮಹತ್ವದ ಘೋಷಣೆ ಮಾಡಿದ ಕೇಂದ್ರ ಸರ್ಕಾರ

0
13

ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರದ ಸಿಯಾಚಿನ್ ಗ್ಲೇಸಿಯರ್ ಪ್ರದೇಶವನ್ನು ಪ್ರವಾಸಿಗರಿಗೆ ಮುಕ್ತಗೊಳಿಸಿ ಆದೇಶ ಹೊರಡಿಸಿದೆ. ಈ ವಿಷಯವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೋಮವಾರ ಲಡಾಕ್​ನಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಲಡಾಕ್​: ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರದ ಸಿಯಾಚಿನ್ ಗ್ಲೇಸಿಯರ್ ಪ್ರದೇಶವನ್ನು ಪ್ರವಾಸಿಗರಿಗೆ ಮುಕ್ತಗೊಳಿಸಿ ಆದೇಶ ಹೊರಡಿಸಿದೆ. ಈ ವಿಷಯವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಕ್ಟೋಬರ್ 21 ರ ಸೋಮವಾರ ಲಡಾಕ್​ನಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಸಿಯಾಚಿನ್ ಗ್ಲೇಸಿಯರ್ ಪ್ರದೇಶ 1984ರ ಆಪರೇಷನ್ ಮೇಘದೂತ್ ಕಾರ್ಯಾಚರಣೆ ಬಳಿಕ ಭಾರತೀಯ ಸೇನೆಯ ನಿಯಂತ್ರಣಕ್ಕೆ ಬಂದಿತ್ತು. ಇದು ಆಯಕಟ್ಟಿನ ಪ್ರದೇಶವಾಗಿದ್ದು, ಈಗ ಇಲ್ಲಿನ ಬೇಸ್​ ಕ್ಯಾಂಪ್​ನಿಂದ ಕುಮಾರ್ ಪೋಸ್ಟ್ ತನಕದ ಪ್ರದೇಶವನ್ನು ಪ್ರವಾಸೋದ್ಯಮದ ಉದ್ದೇಶಕ್ಕೆ ತೆರವುಗೊಳಿಸಲಾಗಿದೆ.

ಈ ಸಂಬಂಧ ಟ್ವೀಟ್​ ಮಾಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್​, ಪ್ರವಾಸೋದ್ಯಮ ವಿಚಾರದಲ್ಲಿ ಲಡಾಕ್​ಗೆ ಭಾರಿ ಭವಿಷ್ಯ ಇದೆ. ಉತ್ತಮ ಸಂಪರ್ಕ ಮೂಲಸೌಕರ್ಯ ಲಡಾಕ್​ಗೆ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲಿದೆ. ಈಗ ಸಿಯಾಚಿನ್ ಪ್ರದೇಶ ಕೂಡ ಪ್ರವಾಸಿಗರಿಗೆ ಮುಕ್ತವಾಗಿದೆ. ವಿಶೇಷವಾಗಿ ಸಿಯಾಚಿನ್​ನಿಂದ ಕುಮಾರ್ ಪೋಸ್ಟ್​ ತನಕದ ಪ್ರದೇಶ ಎಂದು ಹೇಳಿದ್ದಾರೆ. (ಏಜೆನ್ಸೀಸ್​)