ಜಗತ್ತಿನ 3ನೇ ಆಟಗಾರ ಕ್ರಿಸ್ ಗೇಯ್ಲ್

0
22

ಜಗತ್ತಿನ 11 ದೇಶಗಳ ವಿರುದ್ಧ ಶತಕ ಬಾರಿಸಿದ ಮೂರನೇ ಆಟಗಾರ ಎಂಬ ಖ್ಯಾತಿಗೆ ವೆಸ್ಟ್ ಇಂಡೀಸ್ ಸ್ಫೋಟಕ ಬ್ಯಾಟ್ಸ್ ಮನ್ ಕ್ರಿಸ್ ಗೇಯ್ಲ್ ಭಾಜನರಾಗಿದ್ದಾರೆ.
ಟೀಂ ಇಂಡಿಯಾದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಮತ್ತು ದಕ್ಷಿಣ ಆಫ್ರಿಕಾದ ಆಟಗಾರ ಹಾಶೀಂ ಆಮ್ಲಾ ನಂತರ ಏಕದಿನ ಕ್ರಿಕೆಟ್ ನಲ್ಲಿ ಶತಕ ಸಿಡಿಸಿದ ಮೂರನೇ ಆಟಗಾರ ಕ್ರಿಸ್ ಗೇಯ್ಲ್.

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) 2018ರ ವಿಶ್ವಕಪ್ ಅರ್ಹತಾ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಯುನೆಟೆಡ್ ಅಬರ್ ಎಮಿರೆಟ್ಸ್ ತಂಡವನ್ನು 60 ರನ್ ಗಳಿಂದ ಮಣಿಸಿ ಗೆಲುವು ಸಾಧಿಸಿತು. ಈ ಪಂದ್ಯದಲ್ಲಿ ಕ್ರಿಸ್ ಗೇಯ್ಲ್ ಭರ್ಜರಿ ಶತಕ ಸಿಡಿಸಿದ್ದಾರೆ. 93 ಎಸೆತಗಳಲ್ಲಿ 11 ಸಿಕ್ಸರ್ ಮತ್ತು 7 ಬೌಂಡರಿ ಸೇರಿದಂತೆ 123 ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. 
 
ಸಚಿನ್ ತೆಂಡೂಲ್ಕರ್ ಅವರು ಏಕದಿನ ಕ್ರಿಕೆಟ್ ನಲ್ಲಿ ಒಟ್ಟಾರೆ 49 ಶತಕ ಸಿಡಿಸಿದ್ದಾರೆ. ಆಸ್ಟ್ರೇಲಿಯಾ, ಬಾಂಗ್ಲಾದೇಶ, ಇಂಗ್ಲೆಂಡ್, ಕೀನ್ಯಾ, ನಮಿಬಿಯಾ, ನ್ಯೂಜಿಲೆಂಡ್, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ವೆಸ್ಟ್ ಇಂಡೀಸ್ ಮತ್ತು ಜಿಂಬಾಬ್ವೆ ವಿರುದ್ಧ ಶತಕ ಸಿಡಿಸಿದ್ದಾರೆ. ಇನ್ನು ದಕ್ಷಿಣ ಆಫ್ರಿಕಾ ಆಟಗಾರ ಹಾಶೀಂ ಆಮ್ಲಾ ಸಹ 11 ದೇಶಗಳ ವಿರುದ್ಧ ಶತಕ ಸಿಡಿಸಿದ್ದು ಆಸ್ಟ್ರೇಲಿಯಾ, ಬಾಂಗ್ಲಾದೇಶ, ಇಂಗ್ಲೆಂಡ್, ಭಾರತ, ಐರ್ಲೆಂಡ್, ನೆದರ್ಲ್ಯಾಂಡ್, ನ್ಯೂಜಿಲೆಂಡ್, ಪಾಕಿಸ್ತಾನ, ಶ್ರೀಲಂಕಾ, ವೆಸ್ಟ್ ಇಂಡೀಸ್ ಮತ್ತು ಜಿಂಬಾಬ್ವೆ ವಿರುದ್ಧ ಶತಕ ಬಾರಿಸಿದ್ದಾರೆ. 
 
ವೆಸ್ಟ್ ಇಂಡೀಸ್ ನ ಆಟಗಾರ ಕ್ರಿಸ್ ಗೇಯ್ಲ್ ಸಹ ಸಾಲಿಗೆ ಸೇರ್ಪಡೆಗೊಂಡಿದ್ದು ಬಾಂಗ್ಲಾದೇಶ, ಕೆನಡಾ, ಇಂಗ್ಲೆಂಡ್, ಭಾರತ, ಕೀನ್ಯಾ, ನ್ಯೂಜಿಲೆಂಡ್, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಜಿಂಬಾಬ್ವೆ ಮತ್ತು ಯುಎಇ ತಂಡಗಳ ವಿರುದ್ಧ ಶತಕ ಸಿಡಿಸಿದ್ದಾರೆ.