ಟಾಪ್ 10 ಕೋಟೆ ಭೇದಿಸಿದ ಚಹಲ್

0
820

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಬಿಡುಗಡೆ ಮಾಡಿರುವ ತಾಜಾ ಏಕದಿನ ಬೌಲರ್‌ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಅಗ್ರ 10ರ ಕೋಟೆಯನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ .

ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಬಿಡುಗಡೆ ಮಾಡಿರುವ ತಾಜಾ ಏಕದಿನ ಬೌಲರ್‌ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಅಗ್ರ 10ರ ಕೋಟೆಯನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ
ಇದೇ ಮೊದಲ ಬಾರಿಗೆ ಅಗ್ರ 10ರ ಪಟ್ಟಿಯೊಳಗೆ ಪ್ರವೇಶಿಸಿರುವ ಯುಜ್ವೇಂದ್ರ ಚಹಲ್ ಒಟ್ಟು ಮೂರು ಸ್ಥಾನಗಳ ನೆಗೆತ ಕಂಡು ಇಂಗ್ಲೆಂಡ್‌ನ ಆದಿಲ್ ರಶೀದ್ ಜೊತೆಗೆ ಜಂಟಿಯಾಗಿ ಎಂಟನೇ ಸ್ಥಾನ ಹಂಚಿಕೊಂಡಿದ್ದಾರೆ. 

ಬೌಲಿಂಗ್ ವಿಭಾಗವನ್ನು ಭಾರತದ ಜಸ್ಪ್ರೀತ್ ಬುಮ್ರಾ ಮುನ್ನಡೆಸುತ್ತಿದ್ದಾರೆ. ಇನ್ನು 16 ಸ್ಥಾನಗಳ ಭರ್ಜರಿ ನೆಗೆತ ಕಂಡಿರುವ ರವೀಂದ್ರ ಜಡೇಜಾ 25ನೇ ಸ್ಥಾನಕ್ಕೆ ತಲುಪಿದ್ದಾರೆ. 

ವೆಸ್ಟ್‌ಇಂಡೀಸ್ ಬ್ಯಾಟ್ಸ್‌ಮನ್‌ಗಳ ಪೈಕಿ ಪ್ರಭಾವಿ ಪ್ರದರ್ಶನ ನೀಡಿರುವ ಶಾಯ್ ಹೋಪ್ ಹಾಗೂ ಶಿಮ್ರಾನ್ ಹೆಟ್ಮಾಯೆರ್ ಅನುಕ್ರಮವಾಗಿ ನಂ.25 (22 ಸ್ಥಾನಗಳ ಬಡ್ತಿ) ಹಾಗೂ ನಂ. 26ನೇ (31 ಸ್ಥಾನಗಳ ಬಡ್ತಿ) ಸ್ಥಾನಗಳನ್ನು ಹಂಚಿಕೊಂಡಿದ್ದಾರೆ.