ಡಾ. ಚಿದಾನಂದ ಮೂರ್ತಿಗೆ ರಾಷ್ಟ್ರಪತಿ ಗೌರವ

0
131

ಕನ್ನಡದ ಖ್ಯಾತ ಸಂಶೋಧಕ ಡಾ. ಎಂ.ಚಿದಾನಂದ ಮೂರ್ತಿ ಅವರಿಗೆ 2018ನೇ ಸಾಲಿನ ರಾಷ್ಟ್ರಪತಿ ಗೌರವ ಪ್ರಶಸ್ತಿ ಸಂದಿದೆ. ಶಾಸ್ತ್ರೀಯ ಕನ್ನಡ ಭಾಷೆಯಲ್ಲಿ ಅವರು ನಡೆಸಿದ ಸಂಶೋಧನೆಯನ್ನು ಗುರುತಿಸಿ ಈ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.

ಹೊಸದಿಲ್ಲಿ: ಕನ್ನಡದ ಖ್ಯಾತ ಸಂಶೋಧಕ ಡಾ. ಎಂ.ಚಿದಾನಂದ ಮೂರ್ತಿ ಅವರಿಗೆ 2018ನೇ ಸಾಲಿನ ರಾಷ್ಟ್ರಪತಿ  ಗೌರವ ಪ್ರಶಸ್ತಿ ಸಂದಿದೆ. ಶಾಸ್ತ್ರೀಯ ಕನ್ನಡ ಭಾಷೆಯಲ್ಲಿ ಅವರು ನಡೆಸಿದ ಸಂಶೋಧನೆಯನ್ನು ಗುರುತಿಸಿ ಈ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಶಾಸ್ತ್ರೀಯ ತೆಲುಗು, ಸಂಸ್ಕೃತ, ಪರ್ಷಿಯಾ, ಅರೇಬಿಕ್‌, ಪಾಲಿ ಸೇರಿದಂತೆ ವಿವಿಧ ಭಾಷೆಗಳ ಸಂಶೋಧಕರಿಗೂ ಪುರಸ್ಕಾರ ಸಂದಿದೆ. ಸಂಸ್ಕೃತ ಭಾಷೆಯಲ್ಲಿ ಗರಿಷ್ಠ 15 ಮಂದಿ ಗೌರವಕ್ಕೆ ಭಾಜನರಾಗಿದ್ದಾರೆ.