ತಮಿಳುನಾಡಿಗೆ ಗಾಜಾ ಚಂಡಮಾರುತದಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ₹ 1,146 ಕೋಟಿ ಪರಿಹಾರ

0
645

ಗಾಜಾ ಚಂಡಮಾರುತದಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಪರಿಹಾರ ಮತ್ತು ಪುನರ್‌ನಿರ್ಮಾಣ ಕಾರ್ಯ ಕೈಗೊಳ್ಳಲು ತಮಿಳುನಾಡಿಗೆ ₹ 1,146 ಕೋಟಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಡಿಸೆಂಬರ್ 31 ರ ಸೋಮವಾರ ಅನುಮೋದನೆ ನೀಡಿದೆ.

ನವದೆಹಲಿ (ಪಿಟಿಐ): ಗಾಜಾ ಚಂಡಮಾರುತದಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಪರಿಹಾರ ಮತ್ತು ಪುನರ್‌ನಿರ್ಮಾಣ ಕಾರ್ಯ ಕೈಗೊಳ್ಳಲು ತಮಿಳುನಾಡಿಗೆ 1,146 ಕೋಟಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ 2018 ಡಿಸೆಂಬರ್ 31 ರ  ಸೋಮವಾರ ಅನುಮೋದನೆ ನೀಡಿದೆ.

ಗೃಹ ಸಚಿವ ರಾಜನಾಥ್‌ ಸಿಂಗ್ ನೇತೃತ್ವದ ಉನ್ನತ ಸಮಿತಿಯು ಆರ್ಥಿಕ ನೆರವು ಬಿಡುಗಡೆಗೆ ಒಪ್ಪಿಗೆ ಸೂಚಿಸಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಈ ಹೆಚ್ಚುವರಿ ಪರಿಹಾರದ ಮೊತ್ತವನ್ನು ನೀಡುವುದಾಗಿ ರಾಜನಾಥ್‌ ಸಿಂಗ್ ತಿಳಿಸಿದ್ದಾರೆ.

ಕಳೆದ ಡಿಸೆಂಬರ್‌ 3ರಂದು ಕೇಂದ್ರ ಸರ್ಕಾರವು ಮಧ್ಯಂತರ ಪರಿಹಾರವಾಗಿ  353.70 ಕೋಟಿ ಬಿಡುಗಡೆ ಮಾಡಿತ್ತು. 

ಹಣಕಾಸು ಸಚಿವ ಅರುಣ್‌ ಜೇಟ್ಲಿ, ಕೃಷಿ ಸಚಿವ ರಾಧಾ ಮೋಹನ್‌ ಸಿಂಗ್ ಮತ್ತು ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್‌ ಕುಮಾರ್‌ ಸಭೆಯಲ್ಲಿ ಭಾಗವಹಿಸಿದ್ದರು.

ಗಾಜಾ ಚಂಡಮಾರುತಕ್ಕೆ ತಮಿಳುನಾಡಿನಲ್ಲಿ 46 ಜನರು ಬಲಿಯಾಗಿದ್ದರು. ರಾಜ್ಯದ 10 ಜಿಲ್ಲೆಗಳಲ್ಲಿ ಹಾನಿ ಉಂಟಾಗಿತ್ತು. ಕಳೆದ ನವೆಂಬರ್‌ನಲ್ಲಿ  14,910 ಕೋಟಿ ಪರಿಹಾರ ನೀಡುವಂತೆ ತಮಿಳುನಾಡು ಸರ್ಕಾರ ಕೇಂದ್ರಕ್ಕೆ ಬೇಡಿಕೆ ಸಲ್ಲಿಸಿತ್ತು.