ತ್ರಿವಳಿ ತಲಾಖ್ ಕರಡು ಮಸೂದೆ ಸಿದ್ಧ

0
17

ಸುಪ್ರೀಂ ಕೋರ್ಟ್ ತ್ರಿವಳಿ ತಲಾಖ್ ಅನ್ನು ತಾತ್ಕಾಲಿಕವಾಗಿ ನಿಷೇಧಿಸಿದ್ದು, ಇದೀಗ ಅದನ್ನು ಕಾನೂನಾತ್ಮಕವಾಗಿ ಸಂಪೂರ್ಣ ತೆಗೆದು ಹಾಕಲು ಮುಂದಾಗಿರುವ ಕೇಂದ್ರ ಸರ್ಕಾರ ತ್ರಿವಳಿ ತಲಾಖ್ ಕರಡು ಮಸೂದೆಯನ್ನು ಸಿದ್ಧಪಡಿಸಿದ್ದು, ಅದರಲ್ಲಿ ತಲಾಖ್ ನೀಡುವ ಪುರುಷರಿಗೆ ದಂಡ, ಮೂರು ವರ್ಷ ಜೈಲು ಶಿಕ್ಷೆ ಹಾಗೂ ಮಹಿಳೆಯರಿಗೆ ಪರಿಹಾರ ನೀಡಲು ಅವಕಾಶವಿದೆ.

ಕಳೆದ ಆಗಸ್ಟ್ 22ರಂದು ಸುಪ್ರೀಂ ಕೋರ್ಟ್‌ ತ್ರಿವಳಿ ತಲಾಖ್ ಅನ್ನು ನಿಷೇಧಿಸಿತ್ತು. ಸುಪ್ರೀಂ ಆದೇಶ ಜಾರಿಗೆ ಬಂದ ನಂತರವೂ ಕೆಲವು ಕಡೆ ತ್ರಿವಳಿ ತಲಾಖ್‌ ಸಂಪ್ರದಾಯದಂತೆ ಮುಸ್ಲಿಂ ಮಹಿಳೆಯರಿಗೆ ವಿಚ್ಛೇದನ ನೀಡಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ನಿಟ್ಟಿನಲ್ಲಿ ಇದಕ್ಕೆ ಕಾನೂನು ರೂಪಿಸಲು ನಿರ್ಧರಿಸಿರುವ ಕೇಂದ್ರ ಸರ್ಕಾರ ಮಸೂದೆ ಸಿದ್ಧಪಡಿಸಲು ಸಚಿವ ಸಮಿತಿ ರಚಿಸಿತ್ತು. ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ.
 
ಮುಸ್ಲಿಮರಲ್ಲಿ ಜಾರಿ ಇರುವ ವಿವಾಹ ವಿಚ್ಛೇದನ ಪದ್ದತಿಯಾದ ತ್ರಿವಳಿ ತಲಾಖ್ ಅನ್ನು ಆರು ತಿಂಗಳ ಕಾಲ ನಿಷೇಧಿಸಿದ್ದ ಸುಪ್ರೀಂ ಕೋರ್ಟ್, ಈ ಸಂಬಂಧ ಶಾಸನ ಜಾರಿಗೆ ತರುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು.