ತ್ರಿವಳಿ ತಲಾಖ್ ಹೊಸ ಮಸೂದೆಗೆ ಸಂಪುಟ ಒಪ್ಪಿಗೆ

0
12

ತ್ರಿವಳಿ ತಲಾಖ್ ಪದ್ಧತಿಯನ್ನು ನಿಷೇಧಿಸುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಜೂನ್ 12 ರ ಬುಧವಾರ ಅನುಮೋದನೆ ನೀಡಿದೆ.

ನವದೆಹಲಿ (ಪಿಟಿಐ): ತ್ರಿವಳಿ ತಲಾಖ್ ಪದ್ಧತಿಯನ್ನು ನಿಷೇಧಿಸುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಜೂನ್ 12 ರ ಬುಧವಾರ ಅನುಮೋದನೆ ನೀಡಿದೆ.

ಹಿಂದಿನ ಎನ್‌ಡಿಎ ಸರ್ಕಾರ ಹೊರಡಿಸಿದ್ದ ಸುಗ್ರೀವಾಜ್ಞೆಯ ಬದಲಾಗಿ ಈ ಕಾಯ್ದೆ ಜಾರಿಯಾಗಲಿದೆ. ಜೂನ್ 17 ರ ಸೋಮವಾರದಿಂದ ಆರಂಭವಾಗಲಿರುವ ಬಜೆಟ್ ಅಧಿವೇಶನದಲ್ಲಿ ಮಸೂದೆ ಮಂಡನೆಯಾಗಲಿದೆ ಎಂದು ಸಚಿವ ಪ್ರಕಾಶ್‌ ಜಾವಡೇಕರ್‌ ತಿಳಿಸಿದರು.

ಆಧಾರ್‌ ತಿದ್ದುಪಡಿ ಮಸೂದೆ: ಬ್ಯಾಂಕ್ ಖಾತೆ ತೆರೆಯಲು ಹಾಗೂ ಮೊಬೈಲ್ ಸಿಮ್ ಸಂಪರ್ಕ ಪಡೆಯಲು ಆಧಾರ್ ಕಾರ್ಡನ್ನು ಐಚ್ಚಿಕವಾಗಿ ಬಳಸುವ ತಿದ್ದುಪಡಿ ಮಸೂದೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. 

ಸಾರ್ವಜನಿಕ ಹಿತಾಸಕ್ತಿಯಿಂದ ಹೆಚ್ಚು ಕ್ರಿಯಾಶೀಲವಾಗಿ ಕೆಲಸ ಮಾಡಲು ಹಾಗೂ ಆಧಾರ್ ದುರ್ಬಳಕೆಯನ್ನು ತಡೆಯಲು ಯುಐಡಿಎಐಗೆ ಈ ಕಾಯ್ದೆ  ಸಹಕಾರಿಯಾಗಲಿದೆ. ವ್ಯಕ್ತಿಯು ತನ್ನ ಗುರುತು ಸಾಬೀತುಪಡಿಸಲು ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ನೀಡಬೇಕಿಲ್ಲ ಎಂಬುದನ್ನು ಇದು ಸ್ಪಷ್ಟಪಡಿಸುತ್ತದೆ. ಆದರೆ ಆಧಾರ್ ಬಳಕೆ ಮೇಲೆ ಇರುವ ನಿರ್ಬಂಧಗಳನ್ನು ಉಲ್ಲಂಘಿಸುವವರಿಗೆ ದಂಡ ವಿಧಿಸಲು ಮಸೂದೆ ಅವಕಾಶ ನೀಡಿದೆ. 

ರಾಷ್ಟ್ರಪತಿ ಆಡಳಿತ ವಿಸ್ತರಣೆ: ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತವನ್ನು ಮತ್ತೆ ತಿಂಗಳು ವಿಸ್ತರಿಸಲಾಗಿದೆ. ಸಂಪುಟ ಸಭೆಯು ಈ ಪ್ರಸ್ತಾವಕ್ಕೆ ಒಪ್ಪಿಗೆ ನೀಡಿದ್ದು, ರಾಷ್ಟ್ರಪತಿ ಸಹಿ ಹಾಕಿದ ಬಳಿ ಜುಲೈ 3ರಿಂದ ಜಾರಿಯಾಗಲಿದೆ.