ದಕ್ಷಿಣ ಆಫ್ರಿಕಾದ ಹಿರಿಯ ಲೆಗ್ ಸ್ಪಿನ್ನರ್

0
440

ದಕ್ಷಿಣ ಆಫ್ರಿಕಾದ ಹಿರಿಯ ಲೆಗ್ ಸ್ಪಿನ್ನರ್ ಇಮ್ರಾನ್ ತಾಹಿರ್ ವಿಶ್ವಕಪ್ ಟೂರ್ನಿ ನಂತರ ಏಕದಿನ ಕ್ರಿಕೆಟ್‌ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ. ಟ್ವೆಂಟಿ–20 ಕ್ರಿಕೆಟ್‌ನಲ್ಲಿ ಮುಂದುವರಿಯುವುದಾಗಿ ಅವರು ತಿಳಿಸಿದ್ದಾರೆ.

ಜೊಹಾನ್ಸ್‌ಬರ್ಗ್‌ (ಎಎಫ್‌ಪಿ): ದಕ್ಷಿಣ ಆಫ್ರಿಕಾದ ಹಿರಿಯ ಲೆಗ್ ಸ್ಪಿನ್ನರ್ ಇಮ್ರಾನ್ ತಾಹಿರ್ ವಿಶ್ವಕಪ್ ಟೂರ್ನಿ ನಂತರ ಏಕದಿನ ಕ್ರಿಕೆಟ್‌ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ. ಟ್ವೆಂಟಿ–20 ಕ್ರಿಕೆಟ್‌ನಲ್ಲಿ ಮುಂದುವರಿಯುವುದಾಗಿ ಅವರು ತಿಳಿಸಿದ್ದಾರೆ.

ಸೋಮವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ತಾಹಿರ್‌ ‘ಏಕದಿನ ಕ್ರಿಕೆಟ್‌ನಿಂದ ದೂರ ಉಳಿಯುವುದು ಕಷ್ಟ. ಆದರೂ ಅನಿವಾರ್ಯವಾಗಿ ಈ ನಿರ್ಧಾರ ಕೈಗೊಳ್ಳಬೇಕಾಗಿ ಬಂದಿದೆ’ ಎಂದಿದ್ದಾರೆ.

ಒಟ್ಟು 95 ಏಕದಿನ ಪಂದ್ಯಗಳನ್ನು ಆಡಿರುವ ತಾಹಿರ್‌ 156 ವಿಕೆಟ್ ಕಬಳಿಸಿದ್ದಾರೆ. 2011 ಮತ್ತು 2015ರ ವಿಶ್ವಕಪ್‌ ಟೂರ್ನಿಗಳಲ್ಲಿ ಅವರು ಆಡಿದ್ದಾರೆ. 2014 ಮತ್ತು 2016ರ ಟ್ವೆಂಟಿ–20 ವಿಶ್ವಕಪ್‌ ಟೂರ್ನಿಗಳಲ್ಲೂ ಕಣಕ್ಕೆ ಇಳಿದಿದ್ದಾರೆ.