ದೆಹಲಿಯ ಮಾಜಿ ಸಿಎಂ ಮದನ್‌ ಲಾಲ್‌ ಖುರಾನ ಇನ್ನಿಲ್ಲ, ಮೋದಿ ಸಂತಾಪ

0
446

ರಾಷ್ಟ್ರ ರಾಜಧಾನಿ ದೆಹಲಿಯ ಮಾಜಿ ಮುಖ್ಯಮಂತ್ರಿ ಮದನ್‌ ಲಾಲ್‌ ಖುರಾನ ಶನಿವಾರ ರಾತ್ರಿ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. 82 ವರ್ಷದ ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಮಾಜಿ ಮುಖ್ಯಮಂತ್ರಿ ಮದನ್‌ ಲಾಲ್‌ ಖುರಾನ ಅಕ್ಟೋಬರ್ 27 ರ ಶನಿವಾರ ರಾತ್ರಿ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. 82 ವರ್ಷದ ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ಎದೆ ಭಾಗದ ಸೋಂಕು ಮತ್ತು ಜ್ವರದಿಂದ ಕೆಲ ದಿನಗಳಿಂದ ಬಳಲುತ್ತಿದ್ದರು. ಕೀರ್ತಿ ನಗರದ ನಿವಾಸದಲ್ಲಿ ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ವಿಧಿವಶರಾಗಿದ್ದಾರೆ ಎಂದು ಮಗ ಹರೀಶ್‌ ಖುರಾನಾ ತಿಳಿಸಿದ್ದಾರೆ.

ಬಿಜೆಪಿ ನಾಯಕರಾಗಿದ್ದ ಅವರು ನಾಲ್ಕು ಬಾರಿ ಸಂಸದರಾಗಿದ್ದರು. 1993ರಿಂದ 1996ರವರೆಗೆ ದೆಹಲಿ ಮುಖ್ಯಮಂತ್ರಿಯಾಗಿದ್ದ ಮದನ್ ಅವರು, ವಾಜಪೇಯಿ ಅವರ ಸರ್ಕಾರದಲ್ಲಿ ಸಂಸದೀಯ ವ್ಯವಹಾರ ಮತ್ತು ಪ್ರವಾಸೋದ್ಯಮ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 2004ರಲ್ಲಿ ರಾಜಸ್ಥಾಸನದ ರಾಜ್ಯಪಾಲರಾಗಿಸೂ ಸೇವೆ ಸಲ್ಲಿಸಿದ್ದಾರೆ.

ಮೃತರಿಗೆ ಹೆಂಡತಿ, ಮಗ ಮತ್ತು ಇಬ್ಬರು ಪುತ್ರಿಯರು ಇದ್ದಾರೆ. ಈ ವರ್ಷದ ಆಗಸ್ಟ್‌ನಲ್ಲಿ ಮೊದಲ ಮಗ ವಿಮಲ್‌ ಖುರಾನ ಹೃದಯಾಘಾತದಿಂದ ಮೃತಪಟ್ಟಿದ್ದರು.

ಮದನ್‌ ಲಾಲ್‌ ಖುರಾನ ಅವರ ಸಾವಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದು, ಬಿಜೆಪಿಯ ಹಲವು ನಾಯಕರು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ. (ಏಜೆನ್ಸೀಸ್)