ದೆಹಲಿ ಮತ್ತು ಡಿಸ್ಟ್ರಿಕ್ಟ್ಸ್‌ ಕ್ರಿಕೆಟ್ ಸಂಸ್ಥೆಯ (ಡಿಡಿಸಿಎ) ಅಧ್ಯಕ್ಷ ಸ್ಥಾನಕ್ಕೆ “ರಜತ್‌ ಶರ್ಮಾ” ರಾಜೀನಾಮೆ

0
7

ಹಿರಿಯ ಪತ್ರಕರ್ತ ರಜತ್‌ ಶರ್ಮಾ ಅವರು ದೆಹಲಿ ಮತ್ತು ಡಿಸ್ಟ್ರಿಕ್ಟ್ಸ್‌ ಕ್ರಿಕೆಟ್ ಸಂಸ್ಥೆಯ (ಡಿಡಿಸಿಎ) ಅಧ್ಯಕ್ಷ ಸ್ಥಾನಕ್ಕೆ ನವೆಂಬರ್ 16 ರ ಶನಿವಾರ ರಾಜೀನಾಮೆ ನೀಡಿದ್ದಾರೆ.

ನವದೆಹಲಿ: ‌ಹಿರಿಯ ಪತ್ರಕರ್ತ ರಜತ್‌ ಶರ್ಮಾ ಅವರು ದೆಹಲಿ ಮತ್ತು ಡಿಸ್ಟ್ರಿಕ್ಟ್ಸ್‌ ಕ್ರಿಕೆಟ್ ಸಂಸ್ಥೆಯ (ಡಿಡಿಸಿಎ) ಅಧ್ಯಕ್ಷ ಸ್ಥಾನಕ್ಕೆ ನವೆಂಬರ್ 16 ರ ಶನಿವಾರ ರಾಜೀನಾಮೆ ನೀಡಿದ್ದಾರೆ. 

ಸಂಸ್ಥೆಯೊಳಗಿನ ಒತ್ತಡ ಮತ್ತು ಜಿದ್ದಾಜಿದ್ದಿಯ ಕಾರಣಗಳಿಂದಾಗಿ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯವಾಗುತ್ತಿಲ್ಲ ಎಂದು ಶರ್ಮಾ ರಾಜೀನಾಮೆ ಸಲ್ಲಿಸಿದ್ದಾರೆ. ಶರ್ಮಾ ಅವರ 20 ತಿಂಗಳ ಅಧಿಕಾರ ಅವಧಿಯಲ್ಲಿ ಪ್ರಧಾನ ಕಾರ್ಯದರ್ಶಿ ವಿನೋದ್ ತಿಹಾರಾ ಅವರೊಂದಿಗೆ ಭಿನ್ನಾಭಿಪ್ರಾಯ ತಾರಕಕ್ಕೇರಿತು. 

‘ಇಲ್ಲಿನ ಕ್ರಿಕೆಟ್‌ ಆಡಳಿತದಲ್ಲಿ ಸದಾ ಜಟಾಪಟಿ ನಡೆಯುತ್ತದೆ. ಕ್ರಿಕೆಟ್‌ಗಿಂತಲೂ ಇಲ್ಲಿ ಸ್ವಹಿತಾಸಕ್ತಿಯೇ ಹೆಚ್ಚು ಮೇಲುಗೈ ಸಾಧಿಸುವುದು ನನ್ನ ಅನುಭವಕ್ಕೆ ಬಂದಿದೆ’ ಎಂದು ಶರ್ಮಾ ಬೇಸರ ವ್ಯಕ್ತಪಡಿಸಿದ್ದಾರೆ.

‘ನನ್ನ ಪ್ರಾಮಾಣಿಕತೆ ಮತ್ತು ಪಾರದರ್ಶಕತೆ ಸಿದ್ಧಾಂತಗಳೊಂದಿಗೆ ಡಿಡಿಸಿಎನಲ್ಲಿ ನಾನು ಮುಂದುವರಿಯಲು ಸಾಧ್ಯವಾಗುವುದಿಲ್ಲ. ಪ್ರಾಮಾಣಿಕತೆ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗುವುದಿಲ್ಲ’ ಎಂದಿದ್ದಾರೆ. 

ಮಾಜಿ ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರ ಬೆಂಬಲದೊಂದಿಗೆ ಶರ್ಮಾ ಕ್ರಿಕೆಟ್‌ ಮಂಡಳಿಗೆ ಸೇರ್ಪಡೆಯಾಗಿದ್ದರು. ಆದರೆ, ಜೇಟ್ಲಿ ಅವರ ನಿಧನದ ಬಳಿಕ ಡಿಡಿಸಿಎನಲ್ಲಿ ಶರ್ಮಾ ಅವರು ನೆಲೆ ಕಳೆದುಕೊಂಡರು ಎಂದು ಕ್ರಿಕೆಟ್‌ ಮಂಡಳಿಯ ಸದಸ್ಯರು ಅಭಿಪ್ರಾಯ ಪಟ್ಟಿದ್ದಾರೆ. 

ಶರ್ಮಾ ಅವರ 20 ತಿಂಗಳ ಅಧಿಕಾರ ಅವಧಿಯಲ್ಲಿ ಪ್ರಧಾನ ಕಾರ್ಯದರ್ಶಿ ವಿನೋದ್ ತಿಹಾರಾ ಅವರೊಂದಿಗೆ ಭಿನ್ನಾಭಿಪ್ರಾಯ ತಾರಕಕ್ಕೇರಿತು.