ದೇಶದ ಹೆಮ್ಮೆಯ 75 ರೈಲ್ವೆ ನಿಲ್ದಾಣಗಳಲ್ಲಿ 100 ಅಡಿ ಎತ್ತರದಲ್ಲಿ ಬೃಹತ್‌ ತ್ರಿವರ್ಣ ಧ್ವಜ

0
283

ದೇಶದ 75 ರೈಲ್ವೆ ನಿಲ್ದಾಣಗಳಲ್ಲಿ 100 ಅಡಿ ಎತ್ತರದಲ್ಲಿ ರಾಷ್ಟ್ರ ಧ್ವಜವನ್ನು ಹಾರಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಎಲ್ಲ ರೈಲ್ವೆ ವಲಯಗಳಿಗೆ ಈ ಬಗ್ಗೆ ಸುತ್ತೋಲೆ ಹೊರಡಿಸಲಾಗಿದೆ. ವಾರ್ಷಿಕ 50 ಕೋಟಿ ರೂ.ಗಿಂತ ಹೆಚ್ಚು ಆದಾಯ ಗಳಿಸುತ್ತಿರುವ ರೈಲ್ವೆ ಸ್ಟೇಶನ್‌ಗಳಲ್ಲಿ ಈ ಬೃಹತ್‌ ತ್ರಿವರ್ಣ ಧ್ವಜ ಡಿಸೆಂಬರ್‌ ಅಂತ್ಯದ ವೇಳೆಗೆ ಹಾರಾಡಲಿದೆ.

ಹೊಸದಿಲ್ಲಿ: ದೇಶದ 75 ರೈಲ್ವೆ ನಿಲ್ದಾಣಗಳಲ್ಲಿ 100 ಅಡಿ ಎತ್ತರದಲ್ಲಿ ರಾಷ್ಟ್ರ ಧ್ವಜವನ್ನು ಹಾರಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಎಲ್ಲ ರೈಲ್ವೆ ವಲಯಗಳಿಗೆ ಈ ಬಗ್ಗೆ ಸುತ್ತೋಲೆ ಹೊರಡಿಸಲಾಗಿದೆ. ವಾರ್ಷಿಕ 50 ಕೋಟಿ ರೂ.ಗಿಂತ ಹೆಚ್ಚು ಆದಾಯ ಗಳಿಸುತ್ತಿರುವ ರೈಲ್ವೆ ಸ್ಟೇಶನ್‌ಗಳಲ್ಲಿ ಈ ಬೃಹತ್‌ ತ್ರಿವರ್ಣ ಧ್ವಜ ಡಿಸೆಂಬರ್‌ ಅಂತ್ಯದ ವೇಳೆಗೆ ಹಾರಾಡಲಿದೆ. 

ರೈಲ್ವೆ ಸಚಿವ ಪಿಯೂಷ್‌ ಗೋಯೆಲ್‌ ಕೂಡ ಟ್ವೀಟ್‌ ಮಾಡಿದ್ದು, ರಾಷ್ಟ್ರೀಯತೆಯ ಲಾಂಛನಗಳನ್ನು ರೈಲ್ವೆ ನಿಲ್ದಾಣಗಳಲ್ಲಿ ಬಿಂಬಿಸಲು ಈ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಪ್ರತಿ ಧ್ವಜ ಹಾರಾಟದ ವ್ಯವಸ್ಥೆಗೆ 9 ಲಕ್ಷ ರೂ. ಅಂದಾಜು ವೆಚ್ಚವಾಗುವ ನಿರೀಕ್ಷೆ ಇದೆ. 

ಹೀಗಿದ್ದರೂ, ರೈಲ್ವೆ ನಿಲ್ದಾಣಗಳಲ್ಲಿ ಬೃಹತ್‌ ರಾಷ್ಟ್ರ ಧ್ವಜದ ಅಳವಡಿಕೆಯ ಪ್ರಸ್ತಾವನೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ಸ್ವಾಗತಿಸಿದ್ದರೆ, ಇನ್ನು ಕೆಲವರು ಇದಕ್ಕಿಂತಲೂ ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರ ಸೌಕರ್ಯ ಹೆಚ್ಚಳಕ್ಕೆ ಆದ್ಯತೆ ನೀಡಬೇಕು ಎಂದೂ ವಾದಿಸಿದ್ದಾರೆ.