ನವದೆಹಲಿ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ ನಾಯಕಿ

0
9

ದೆಹಲಿ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್‌ ಹಿರಿಯ ನಾಯಕಿ ಶೀಲಾ ದೀಕ್ಷಿತ್‌ ಅವರಿಂದು ದೆಹಲಿಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ನವದೆಹಲಿ: ದೆಹಲಿ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್‌ ಹಿರಿಯ ನಾಯಕಿ ಶೀಲಾ ದೀಕ್ಷಿತ್‌ ಅವರಿಂದು ದೆಹಲಿಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಮೂರು ಬಾರಿ ದೆಹಲಿಯ ಸಿಎಂ ಆಗಿದ್ದ ಶೀಲಾ ದೀಕ್ಷಿತ್ ಅವರಿಗೆ 81 ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಜುಲೈ 19 ರ ಶುಕ್ರವಾರ ಫೋರ್ಟಿಸ್‌ ಎಸ್ಕಾರ್ಟ್ಸ್‌ ಹಾರ್ಟ್‌ ಇನ್ಸ್‌ಟಿಟ್ಯೂಟ್‌ ಆಸ್ಪತ್ರೆಗೆ ದಾಖಲಿಸಾಗಿತ್ತು. ಜುಲೈ 20 ರ ಶನಿವಾರ ಮಧ್ಯಾಹ್ನ 3:15ಕ್ಕೆ ಹೃದಯಾಘಾತ ಉಂಟಾಗಿತ್ತು. ಕೃತಕ ಉಸಿರಾಟ ವ್ಯವಸ್ಥೆಯಡಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ,ಮಧ್ಯಾಹ್ನ 3:55ಕ್ಕೆ ಅವರು ನಿಧನರಾದರು ಎಂದು ಆಸ್ಪತ್ರೆಯ ನಿರ್ದೇಶಕ ಡಾ.ಅಶೋಕ್‌ ಸೇಠ್ ಹೇಳಿರುವುದಾಗಿ ಎಎನ್‌ಐ ವರದಿ ಮಾಡಿದೆ.  ಮೃತಪಟ್ಟಿದ್ದಾರೆ.

ರಾಜಕೀಯ ಜೀವನ 

ಹಿರಿಯ ಕಾಂಗ್ರೆಸ್​ ಮುಖಂಡರಾಗಿದ್ದ ಶೀಲಾ ದೀಕ್ಷಿತ್ ಅವರು 1998ರಿಂದ 2013ರವರೆಗೆ ದೆಹಲಿಯ ಮುಖ್ಯಮಂತ್ರಿಯಾಗಿದ್ದರು. 2014ರಲ್ಲಿ ಕೇರಳದ ರಾಜಪಾಲರಾಗಿ​(ಮಾರ್ಚ್ – ಆಗಸ್ಟ್ ವರೆಗೆ) ಸೇವೆ ಸಲ್ಲಿಸಿದ್ದರು, 2019ರ ಜನೇವರಿಯಲ್ಲಿ ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿ(ಡಿಪಿಸಿಸಿ) ಅಧ್ಯಕ್ಷೆಯಾಗಿ ಆಯ್ಕೆ ಆಗಿದ್ದರು.

81 ನೇ ವಯಸ್ಸಿನಲ್ಲಿ ದೆಹಲಿ ಈಶಾನ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಕಣಕ್ಕೆ ಇಳಿಯುವ ಮೂಲಕ ಒಮ್ಮೆಲೆ ಶೀಲಾ ದೀಕ್ಷಿತ್ ರಾಷ್ಟ್ರದ ಗಮನ ಸೆಳೆದಿದ್ದರು.

# ಶೀಲಾ ದೀಕ್ಷಿತ್‌ ಜನನ : ಮಾರ್ಚ್ 31, 1938 ಪಂಜಾಬ್ ನ ಕಪುರ್ತಲದಲ್ಲಿ ಜನಿಸಿದ್ದರು

# ವಿದ್ಯಾಭ್ಯಾಸ ದೆಹಲಿಯ ಯುನಿವರ್ಸಿಟಿಯಲ್ಲಿ ಇತಿಹಾಸ ವಿಭಾಗದಲ್ಲಿ ಎಂ.ಎ ಪದವಿ ಪಡೆದಿದ್ದರು.