ನವೆಂಬರ್ 27 ರಿಂದ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆ

0
408

ಕರ್ನಾಟಕ ರಾಜ್ಯದಲ್ಲೇ ಮೊದಲ ಬಾರಿಗೆ ಕಲಬುರ್ಗಿಯಲ್ಲಿ ನ. 27 ಹಾಗೂ 28 ರಂದು ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ)ಯ ಸಭೆ ನಡೆಯಲಿದೆ.

ಕಲಬುರ್ಗಿ: ರಾಜ್ಯದಲ್ಲೇ ಮೊದಲ ಬಾರಿಗೆ ಕಲಬುರ್ಗಿಯಲ್ಲಿ ನ. 27 ಹಾಗೂ 28 ರಂದು ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ)ಯ ಸಭೆ ನಡೆಯಲಿದೆ.

ಸಂಸದ ಮಲ್ಲಿಕಾರ್ಜುನ ಖರ್ಗೆ ಅವರು ಸಮಿತಿಯ ಅಧ್ಯಕ್ಷರಾಗಿದ್ದು, 15 ಜನ ಲೋಕಸಭಾ ಸದಸ್ಯರು, 7 ಜನ ರಾಜ್ಯಸಭಾ ಸದಸ್ಯರು ಸೇರಿದಂತೆ 22 ಸದಸ್ಯರು ಈ ಸಮಿತಿಯ ಸದಸ್ಯರಾಗಿದ್ದಾರೆ. ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ 40 ರಿಂದ 60 ಅಧಿ ಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಎಚ್‌ಕೆಆರ್‌ಡಿಬಿ)ಯ ಕಚೇರಿಯಲ್ಲಿ ಸಭೆ ನಡೆಯಲಿದೆ. ಖರ್ಗೆ ಅವರು ಎರಡನೇ ಬಾರಿಗೆ ಈ ಸಮಿತಿಯ ಅಧ್ಯಕ್ಷರಾಗಿದ್ದಾರೆ. ದೇಶದ ಎಲ್ಲಾ ಇಲಾಖೆಗಳ ಮುಖ್ಯಸ್ಥರ ಜತೆ ಲೆಕ್ಕಪತ್ರಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಲಿದ್ದಾರೆ.

‘ಸಮಿತಿ ಸದಸ್ಯರು ಹಾಗೂ ಅಧಿಕಾರಿ ಗಳು ಮೊದಲ ದಿನ ಇಎಸ್‌ಐಸಿ ವೈದ್ಯ ಕೀಯ ಕಾಲೇಜು ಮತ್ತು ಆಸ್ಪತ್ರೆ, ಗುಲಬರ್ಗಾ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆಯುವರು’ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.