ನೇತಾಜಿಯ ಜನ್ಮ ವಾರ್ಷಿಕೋತ್ಸವಕ್ಕೆ ಗೌರವಾರ್ಪಣೆ ಮಾಡಿದ ರಾಷ್ಟ್ರಪತಿ, ಪ್ರಧಾನಿ

0
657

ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 2019 ಜನೇವರಿ 23 ರ ಬುಧವಾರ ಸ್ವಾತಂತ್ರ್ಯ ಹೋರಾಟಗಾರ ಸುಭಾಷ್‌ ಚಂದ್ರ ಬೋಸ್‌ ಅವರ 122ನೇ ಜನ್ಮ ವಾರ್ಷಿಕೋತ್ಸವ ಅಂಗವಾಗಿ ಗೌರವ ಸಲ್ಲಿಸಿದರು.

ನವದೆಹಲಿ: ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು  2019 ಜನೇವರಿ 23 ರ ಬುಧವಾರ ಸ್ವಾತಂತ್ರ್ಯ ಹೋರಾಟಗಾರ ಸುಭಾಷ್‌ ಚಂದ್ರ ಬೋಸ್‌ ಅವರ 122ನೇ ಜನ್ಮ ವಾರ್ಷಿಕೋತ್ಸವ ಅಂಗವಾಗಿ ಗೌರವ ಸಲ್ಲಿಸಿದರು.

ರಾಷ್ಟ್ರಪತಿ ಟ್ವೀಟ್‌ ಮಾಡಿ, ಜನ್ಮ ವಾರ್ಷಿಕೋತ್ಸವ ಅಂಗವಾಗಿ ನೇತಾಜಿ ಅವರಿಗೆ ಗೌರವ ಸಲ್ಲಿಸುತ್ತೇನೆ. ಅವರೊಬ್ಬರು ದೇಶದ ಅತ್ಯಂತ ಪ್ರೀತಿ ಪಾತ್ರ ರಾಷ್ಟ್ರೀಯ ನಾಯಕರಲ್ಲಿ ಒಬ್ಬರಾಗಿದ್ದಾರೆ ಮತ್ತು ಸ್ವಾತಂತ್ರ್ಯ ಹೋರಾಟದ ಸಂಕೇತವಾಗಿದ್ದಾರೆ. ನೇತಾಜಿ ಅವರನ್ನು ಅನುಸರಿಸಲಾಗುತ್ತದೆ, ನೆನಪಿಸಿಕೊಳ್ಳಲಾಗುತ್ತದೆ ಮತ್ತು ಇಂದಿನ ದಿನ ದೇಶ ಅವರನ್ನು ಕಳೆದುಕೊಂಡಿದೆ ಎಂದು ಹೇಳಿದ್ದಾರೆ.

ಇದರೊಂದಿಗೆ ಪ್ರಧಾನಿ ಮೋದಿ ಕೂಡ ಟ್ವೀಟ್‌ ಮಾಡಿದ್ದು, ನೇತಾಜಿ ಸುಭಾಷ್‌ ಚಂದ್ರ ಬೋಸ್‌ರ ಜನ್ಮ ವಾರ್ಷಿಕೋತ್ಸವ ಅಂಗವಾಗಿ ಅವರಿಗೆ ಶಿರಬಾಗುತ್ತೇನೆ. ಅವರು ಭಾರತವನ್ನು ಸ್ವಾತಂತ್ರ್ಯಗೊಳಿಸುವಲ್ಲಿ ಅಗ್ರಗಣ್ಯ ಮತ್ತು ಘನತೆಯ ಜೀವನವನ್ನು ನಡೆಸಿದ್ದರು. ನಾವು ಅವರ ಆದರ್ಶಗಳನ್ನು ಪೂರೈಸಲು ಮತ್ತು ಬಲಿಷ್ಠ ಭಾರತ ನಿರ್ಮಾಣವನ್ನು ಸಾಕಾರಗೊಳಿಸಲು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.

ವಸ್ತು ಸಂಗ್ರಹಾಲಯ ಉದ್ಘಾಟನೆ

ನೇತಾಜಿಯವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ಮೋದಿ ಅವರಿಂದು ದೆಹಲಿಯ ಕೆಂಪುಕೋಟೆಯಲ್ಲಿ ಬೋಸ್‌ರ ಮತ್ತು ಭಾರತೀಯ ಸೇನೆಯ ವಸ್ತುಸಂಗ್ರಹಾಲಯವನ್ನು ಉದ್ಘಾಟಿಸಿದರು.2018 ಡಿಸೆಂಬರ್ 30 ರಂದು ಮೋದಿ ಅವರು ಸ್ವಾತಂತ್ರ್ಯ ಹೋರಾಟಗಾರರ ಗೌರವಾರ್ಥ ಅಂಡಮಾನ್‌ನ ರೋಸ್‌ ದ್ವೀಪವನ್ನು ಮತ್ತು ನಿಕೋಬಾರ್‌ ದ್ವೀಪವನ್ನು ನೇತಾಜಿ ಸುಭಾಷ್ ಚಂದ್ರ ಬೋಸ್ ದ್ವೀಪ ಎಂದು ಮರುನಾಮಕರಣ ಮಾಡಿದ್ದರು. (ಏಜೆನ್ಸೀಸ್)