ನ್ಯಾ. ದಿನೇಶ್‌ ಮಾಹೇಶ್ವರಿ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ಬಡ್ತಿ

0
775

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಾಹೇಶ್ವರಿ ಅವರಿಗೆ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ಬಡ್ತಿ ನೀಡಲಾಗಿದೆ.

ನವದೆಹಲಿ(ಪಿಟಿಐ): ಕರ್ನಾಟಕ  ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಾಹೇಶ್ವರಿ ಅವರಿಗೆ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ಬಡ್ತಿ ನೀಡಲಾಗಿದೆ.

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸಂಜೀವ್‌ ಖನ್ನಾ ಅವರಿಗೂ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

ಸುಪ್ರೀಂ ಕೋರ್ಟ್ ಕೊಲಿಜಿಯಂ ಈ ಇಬ್ಬರ ಹೆಸರನ್ನು ಶಿಫಾರಸು ಮಾಡಿತ್ತು. ರಾಷ್ಟ್ರಪತಿ ರಾಮನಾಥ ಕೋವಿಂದ್‌ ಜನೇವರಿ 16 ರ ಬುಧವಾರ ಸಂಜೆ ನೇಮಕ ಆದೇಶಕ್ಕೆ ಸಹಿ ಹಾಕಿದ್ದಾರೆ. ಇದರೊಂದಿಗೆ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಮೂರ್ತಿಗಳ ಸಂಖ್ಯೆ 28ಕ್ಕೆ ಏರಿದೆ. ಇನ್ನೂ ಮೂರು ನ್ಯಾಯಮೂರ್ತಿಗಳ ಹುದ್ದೆ ಖಾಲಿ ಉಳಿದಿವೆ.

ಸೇವಾ ಜೇಷ್ಠತೆ ಆಧಾರದ ಮೇಲೆ ಕೊಲಿಜಿಯಂ ಈ ಮೊದಲು ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಾಜೇಂದ್ರ ಮೆನನ್‌ ಮತ್ತು ರಾಜಸ್ಥಾನ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪ್ರದೀಪ್‌ ನಂದ್ರಜೋಗ್‌ ಅವರ ಹೆಸರನ್ನು ಶಿಪಾರಸು ಮಾಡಿತ್ತು. ಆದರೆ, ಸರ್ಕಾರ ಅದನ್ನು ಪರಿಗಣಿಸಿರಲಿಲ್ಲ. ಸೇವಾ ಜೇಷ್ಠತೆಯಲ್ಲಿ ಇಬ್ಬರಿಗಿಂತ ಕಿರಿಯರಾದ ಸಂಜೀವ್‌ ಖನ್ನಾ ಅವರಿಗೆ ಬಡ್ತಿ ನೀಡಿರುವುದಕ್ಕೆ ಕಾನೂನು ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಎಸ್‌.ಕೆ. ಕೌಲ್‌ ಸೇರಿದಂತೆ ಕೆಲವು ನ್ಯಾಯಮೂರ್ತಿಗಳು ಆಕ್ಷೇಪ ವ್ಯಕ್ತಪಡಿಸಿ ರಾಷ್ಟ್ರಪತಿ ಮತ್ತು ಕೊಲಿಜಿಯಂಗೆ ಪತ್ರ ಬರೆದಿದ್ದಾರೆ.

 

ಈ ಕುರಿತಂತೆ ಜಿಲ್ಲಾಧಿಕಾರಿ ವರದಿ ನೀಡಿದ್ದು, ಸ್ಥಳೀಯ ಶಾಸಕರೂ ಒಪ್ಪಿಗೆ ಸೂಚಿಸಿದ್ದಾರೆ. ಈ ವಿಚಾರವನ್ನು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರ ಮುಂದಿಟ್ಟು, ಒಪ್ಪಿಗೆ ಪಡೆದು ದೇವಸ್ಥಾನವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ಸೇರಿಸಲಾಗುವುದು ಎಂದು ಹೇಳಿದರು.

‘ಈಗಾಗಲೇ ನಾನು ದೇವಸ್ಥಾನಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದೇನೆ. ವಿಷ ಪ್ರಸಾದ ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ಈ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.