ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ : ನಿವೃತ್ತ ನ್ಯಾ.ಎಚ್.ಎನ್.ನಾಗಮೋಹನದಾಸ್‌ ಆಯೋಗ ರಚನೆ

0
47

ಪರಿಶಿಷ್ಟ ಪಂಗಡದ ಜನಾಂಗದವರಿಗೆ ಮೀಸಲು ಪ್ರಮಾಣ ಹೆಚ್ಚಳದ ಪರಿಶೀಲನೆಗಾಗಿ ನ್ಯಾ.ಎಚ್.ಎನ್.ನಾಗಮೋಹನದಾಸ್‌ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಬೆಂಗಳೂರು : ಪರಿಶಿಷ್ಟ ಪಂಗಡದ ಜನಾಂಗದವರಿಗೆ ಮೀಸಲು ಪ್ರಮಾಣ ಹೆಚ್ಚಳದ ಪರಿಶೀಲನೆಗಾಗಿ ನ್ಯಾ.ಎಚ್.ಎನ್.ನಾಗಮೋಹನದಾಸ್‌ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. 

ಪರಿಶಿಷ್ಟ ಪಂಗಡದವರಿಗೆ ಪ್ರಸ್ತುತ ನೀಡುತ್ತಿರುವ ಮೀಸಲಾತಿ ಪ್ರಮಾಣ ಹೆಚ್ಚಳದ ಬಗ್ಗೆ ಸಮಗ್ರ ಅಧ್ಯಯನ ನಡೆಸಿ 2 ತಿಂಗಳ ಒಳಗೆ ವರದಿ ಸ್ಲಲಿಸಲು ಸೂಚಿಸಲಾಗಿದೆ. ಪರಿಶಿಷ್ಟ ಜಾತಿಗಳಿಗೆ ಈಗಿರುವ ಶೇ.15 ರ ಮೀಸಲಾತಿಯು ಅವರ ಜನಸಂಖ್ಯೆಗೆ ಹೋಲಿಸಿದರೆ ಶೇ.2 ರಷ್ಟು ಕಡಿಮೆ ಇದೆ. ಅದೇ ರೀತಿ ಪರಿಶಿಷ್ಟ ಪಂಗಡದವರಿಗೆ ಈಗಿರುವ ಶೇ.3 ಮೀಸಲಾತಿ ಅವರ ಜನಸಂಖ್ಯೆಗೆ ಹೋಲಿಸಿದರೆ ಶೇ. 4 ರಷ್ಟು ಕಡಿಮೆ ಇರುತ್ತದೆ. ಆದ್ದರಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದವರು ಅವರ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಹೆಚ್ಚಿಸಬೇಕೆಂಬ ಒತ್ತಡ ಸರಕಾರದ ಮೇಲಿತ್ತು.
 
ಇತ್ತೀಚೆಗೆ ಪರಿಶಿಷ್ಟ ಪಂಗಡದ ಅನೇಕ ಸಂಘಟನೆಗಳು ಹಾಗೂ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿಯವರ ನೇತೃತ್ವದಲ್ಲಿ ಪಾದಯಾತ್ರೆ ಮೂಲಕ ಬಂದು ಬೆಂಗಳೂರಿನಲ್ಲಿ ಧರಣಿ ನಡೆಸಿದ ಬಳಿಕ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸರಕಾರ ಭರವಸೆ ನೀಡಿತ್ತು. ಅದರಂತೆ ಈಗ ಆಯೋಗ ರಚಿಸಿ ಸರಕಾರ ಆದೇಶ ಹೊರಡಿಸಿದೆ.