ಪಾಕ್‌ ಮಾನವ ಹಕ್ಕುಗಳ ಕಾರ್ಯಕರ್ತೆ ಆಸ್ಮಾ ನಿಧನ

0
15

ಮಾನವ ಹಕ್ಕುಗಳ ಪರವಾಗಿ ಕೆಲಸ ಮಾಡುತ್ತಿದ್ದ ಅವರು ಪಾಕಿಸ್ತಾನದ ಸುಪ್ರೀಂ ಕೋರ್ಟ್‌ನ ವಕೀಲರ ಸಂಘದ ಅಧ್ಯಕ್ಷೆಯಾಗಿ ಕೆಲಸ ಮಾಡಿದ ಮೊದಲ ಮಹಿಳೆ.

ಸೇನಾ ಆಡಳಿತದ ವಿರುದ್ಧ ಬಲವಾದ ದನಿ ಎತ್ತಿದ್ದ ಪಾಕಿಸ್ತಾನದ ಸಾಮಾಜಿಕ ಕಾರ್ಯಕರ್ತೆ, ಮಾನವಹಕ್ಕುಗಳ ಹೋರಾಟಗಾರ್ತಿ ಆಸ್ಮಾ ಜಹಾಂಗೀರ್‌ (66) ಭಾನುವಾರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಮಾನವ ಹಕ್ಕುಗಳ ಪರವಾಗಿ ಕೆಲಸ ಮಾಡುತ್ತಿದ್ದ ಅವರು ಪಾಕಿಸ್ತಾನದ ಸುಪ್ರೀಂ ಕೋರ್ಟ್‌ನ ವಕೀಲರ ಸಂಘದ ಅಧ್ಯಕ್ಷೆಯಾಗಿ ಕೆಲಸ ಮಾಡಿದ ಮೊದಲ ಮಹಿಳೆ.

‘ಹೃದಯಾಘಾತವಾದ ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಅವರು ಬದುಕುಳಿಯಲಿಲ್ಲ’ ಎಂದು ಹಿರಿಯ ವಕೀಲ ಆದಿಲ್ ರಾಜಾ ತಿಳಿಸಿದ್ದಾರೆ.